
ನವದೆಹಲಿ, 06 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದಲ್ಲಿ ಉಂಟಾದ ಬಿಕ್ಕಟ್ಟಿನ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯವಾಗಿ ವರ್ತಿಸಿದೆ ಎಂದು ಕಾಂಗ್ರೆಸ್ ಸಂಸದ ಶಶಿಕಾಂತ್ ಸೆಂಥಿಲ್ ಆರೋಪಿಸಿದ್ದಾರೆ.
ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ದೇಶದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರು ಆಹಾರ, ನೀರು, ವ್ಯವಸ್ಥೆಗಳಿಲ್ಲದೆ ಪರದಾಡುತ್ತಿರುವ ಸಂದರ್ಭದಲ್ಲಿ ಸರ್ಕಾರ ಜವಾಬ್ದಾರಿ ವಹಿಸಿಕೊಂಡಿಲ್ಲ ಎಂದು ಟೀಕಿಸಿದರು.
ಕಳೆದ ನಾಲ್ಕೈದು ದಿನಗಳಲ್ಲಿ 1,000 ಕ್ಕೂ ಹೆಚ್ಚು ವಿಮಾನಗಳು ರದ್ದಾಗಿದ್ದು, ಲಕ್ಷಾಂತರ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ಹೇಳಿದರು. ಇಂಡಿಗೋ 60–65% ಮಾರುಕಟ್ಟೆ ಪಾಲು ಹೊಂದುವ ಮಟ್ಟಿಗೆ ಏಕಸ್ವಾಮ್ಯವಾಗಿ ಬೆಳೆದಿದ್ದನ್ನು ಸರ್ಕಾರ ಹೇಗೆ ಅನುಮತಿಸಿತು ಎಂಬುದರ ಕುರಿತು ಸರಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa