ಸ್ಕ್ಯಾನಿಂಗ್ ಸೆಂಟರ್‍ಗಳಲ್ಲಿ ಕಡ್ಡಾಯವಾಗಿ ನಿಯಮ ಪಾಲನೆಗೆ ಕ್ರಮ : ಶಶಿಧರ ಕೋಸಂಬೆ
ಹೊಸಪೇಟೆ, 06 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ 5 ಸರ್ಕಾರಿ ಮತ್ತು 75 ಖಾಸಗಿ ಸ್ಕ್ಯಾನಿಂಗ್ ಸೆಂಟರ್‍ಗಳು ಕಾರ್ಯನಿರ್ವಹಿಸುತ್ತಿವೆ. ಪಿಸಿ&ಪಿಎನ್‍ಡಿಟಿ 1994 ಕಾಯ್ದೆಯಡಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿರ್ಲಕ್ಷಿಸಿದರೇ ಅಂತವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಸೆ
ಸ್ಕ್ಯಾನಿಂಗ್ ಸೆಂಟರ್‍ಗಳಲ್ಲಿ ಕಡ್ಡಾಯವಾಗಿ ನಿಯಮ ಪಾಲನೆಗೆ ಕ್ರಮ : ಶಶಿಧರ ಕೋಸಂಬೆ


ಸ್ಕ್ಯಾನಿಂಗ್ ಸೆಂಟರ್‍ಗಳಲ್ಲಿ ಕಡ್ಡಾಯವಾಗಿ ನಿಯಮ ಪಾಲನೆಗೆ ಕ್ರಮ : ಶಶಿಧರ ಕೋಸಂಬೆ


ಹೊಸಪೇಟೆ, 06 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ 5 ಸರ್ಕಾರಿ ಮತ್ತು 75 ಖಾಸಗಿ ಸ್ಕ್ಯಾನಿಂಗ್ ಸೆಂಟರ್‍ಗಳು ಕಾರ್ಯನಿರ್ವಹಿಸುತ್ತಿವೆ. ಪಿಸಿ&ಪಿಎನ್‍ಡಿಟಿ 1994 ಕಾಯ್ದೆಯಡಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿರ್ಲಕ್ಷಿಸಿದರೇ ಅಂತವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಸೆಂಟರ್ ಮುಚ್ಚಲು ಕ್ರಮ ವಹಿಸಲಾಗುವುದು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಅವರು ಹೇಳಿದ್ದಾರೆ.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳು, ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಏರ್ಪಡಿಸಿದ್ದ ಆರ್‍ಟಿಇ ಅನುμÁ್ಠನದ ಕುರಿತು ಶಿಕ್ಷಣ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಕ್ಕಳ ಹಿತ ಮತ್ತು ಹಕ್ಕುಗಳ ರಕ್ಷಣೆಗಾಗಿ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕಿದೆ. ರಾಜ್ಯದಲ್ಲಿ ಮಕ್ಕಳ ಸಹಾಯವಾಣಿಗೆ ವಿವಿಧ ಜಿಲ್ಲೆಗಳಿಂದ ದೂರುಗಳು ಹೆಚ್ಚಾಗಿ ಬರುತ್ತಿವೆ. ವಿಜಯನಗರ ಜಿಲ್ಲೆಯಿಂದ ಹೆಚ್ಚಾಗಿ ಆರೋಗ್ಯ ಮತ್ತು ಶಿಕ್ಷಣ ಸಂಬಂಧಿತ ದೂರುಗಳು ಹೆಚ್ಚಾಗಿವೆ. ರಾಜ್ಯದಲ್ಲೇ ಅಪೌಷ್ಠಿಕತೆಯಿಂದ ಬಳಲುತ್ತಿರುವವರ ಸಂಖ್ಯೆ ವಿಜಯನಗರ ಜಿಲ್ಲೆಯಲ್ಲಿ ಹೆಚ್ಚಿದೆ ಎಂಬ ಮಾಹಿತಿ ಇದೆ.

ಆರೋಗ್ಯ ಇಲಾಖೆ : ಜಿಲ್ಲೆಯಲ್ಲಿ 580 ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ. ನಗರದ ನೂರು ಹಾಸಿಗೆ ಆಸ್ಪತ್ರೆಯ ಅಪೌಷ್ಠಿಕ ಮಕ್ಕಳ ಪುನಶ್ಚೇತನ ಘಟಕದಲ್ಲಿ ಕಳೆದ ಆರು ತಿಂಗಳ ದಾಖಲೆ ವೀಕ್ಷಿಸಿದರೇ ಒಬ್ಬರು ಸಹಿತ ನೊಂದಾಣಿ ಆಗದಿರುವುದು ಆಶ್ಚರ್ಯ ಮೂಡಿಸಿದೆ. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ತಂಡದ ವೈದ್ಯರು, ಆರ್‍ಸಿಹೆಚ್ ಅಧಿಕಾರಿಗಳಾಗಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಸೇರಿ ಯಾವುದೇ ಒಂದು ಮಗುವನ್ನು ದಾಖಲಿಸಿರದಿರುವುದು ಕಂಡು ಬಂದಿದೆ.

ಶೀಘ್ರವೇ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ತಂಡ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಸಭೆ ನಡೆಸಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಮೀಕ್ಷೆ ನಡೆಸಿ ಪುನಶ್ಚೇತನ ಘಟಕಕ್ಕೆ ದಾಖಲಿಸಲು ಕ್ರಮ ವಹಿಸಬೇಕು. ಇಂದು ಆರೋಗ್ಯ ಅಧಿಕಾರಿಗಳು ಸಮಕ್ಷಮದಲ್ಲಿ ನಗರದ ಸಹಾಯ ಮತ್ತು ರಾಘವ್ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಧೀಡಿರ್ ಭೇಟಿ ನೀಡಿ ಪರಿಶೀಲಿಸಿದಾಗ ಸಹಾಯ ಡಯಾಗ್ನೋಸ್ಟಿಕ್ ಸೆಂಟರ್‍ನಲ್ಲಿ ಸ್ಕ್ಯಾನಿಂಗ್ ಕೊಠಡಿಯಲ್ಲಿ ಸಿಸಿ ಕ್ಯಾಮೆರಾಗಳ ಬಳಕೆ ಮಾಡಿರುವುದು ಕಾನೂನು ಬಾಹಿರ ಐಟಿ ಕಾಯ್ದೆ ಪ್ರಕಾರ ಅಪರಾಧವಾಗಲಿದೆ. ಪಿಸಿ&ಪಿಎನ್‍ಡಿಟಿ 1994 ಕಾಯ್ದೆಯಡಿ ಪ್ರತಿ ಸ್ಕ್ಯಾನಿಂಗ್‍ನಲ್ಲಿ ಕಡ್ಡಾಯವಾಗಿ ವೈದ್ಯರು ಒಬ್ಬರೇ ಒಳಗಡೆ ಇದ್ದು ಸ್ಕ್ಯಾನ್ ಮಾಡಬೇಕು. ಆದರೆ ಈ ಎರಡು ಸ್ಕ್ಯಾನಿಂಗ್ ಸೆಂಟರ್‍ನಲ್ಲಿ ಈ ನಿಯಮ ಉಲ್ಲಂಘಿಸಿರುವುದು ಕಂಡು ಬಂದ ಹಿನ್ನಲೆಯಲ್ಲಿ ಶೋಕಾಸು ನೋಟಿಸ್ ನೀಡುವಂತೆ ಸೂಚಿಸಲಾಗಿದೆ.

ಜಿಲ್ಲೆಯ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‍ಗಳಲ್ಲಿ ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಬೇಕು ನಿರ್ಲಕ್ಷಿಸಿದರೇ ಕಾನೂನು ಕ್ರಮ ಜರುಗಿಸಲಾಗುವುದು. ಕೂಡಲೇ ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ಆರ್‍ಸಿಹೆಚ್ ಮತ್ತು ನೋಡಲ್ ಅಧಿಕಾರಿಗಳ ಮೂರು ತಂಡಗಳನ್ನು ರಚಿಸಿ ಪ್ರತಿ ತಂಡಗಳು 25 ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಒಂದು ವಾರದಲ್ಲಿ ತಪಾಸಣೆ ಮಾಡುವ ಮೂಲಕ ವಿಸ್ಕøತ ವರದಿಯನ್ನು ಸಲ್ಲಿಸಬೇಕು.

ನಿಯಮ ಉಲ್ಲಂಘಿಸಿದವರ ವಿರುದ್ಧ ಕಾರಣ ಕೇಳಿ ನೋಟಿಸ್ ವಿತರಣೆ. ತಪಾಸಣೆಯಲ್ಲಿ ಅಪರಾಧ ಕಂಡು ಬಂದರೆ ಸೆಂಟರ್ ಬಂದ್ ಮಾಡಲು ಕ್ರಮ ವಹಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande