ಅಹಿಂದ ವರ್ಗಗಳ ಸಂಘಟನೆಯಲ್ಲಿ ನನ್ನ ಕೊಡುಗೆ : ಸಿದ್ದರಾಮಯ್ಯ
ಹಾಸನ, 06 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಅಹಿಂದ ವರ್ಗಗಳ ಸಂಘಟನೆಯಲ್ಲಿ ನನ್ನ ಕೊಡುಗೆಯಿದೆ, ಮಂಡ್ಯಕ್ಕೆ ಕುಮಾರಸ್ವಾಮಿಯವರ ಕೊಡುಗೆಗಳೇನು ಎಂದು ಅವರು ಸ್ಪಷ್ಟಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಹಿಂದ ವರ್ಗಕ್ಕೆ ಸಿದ್ದರ
Cm


ಹಾಸನ, 06 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಅಹಿಂದ ವರ್ಗಗಳ ಸಂಘಟನೆಯಲ್ಲಿ ನನ್ನ ಕೊಡುಗೆಯಿದೆ, ಮಂಡ್ಯಕ್ಕೆ ಕುಮಾರಸ್ವಾಮಿಯವರ ಕೊಡುಗೆಗಳೇನು ಎಂದು ಅವರು ಸ್ಪಷ್ಟಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,

ಅಹಿಂದ ವರ್ಗಕ್ಕೆ ಸಿದ್ದರಾಮಯ್ಯನವರ ಕೊಡುಗೆಯ ಬಗ್ಗೆ ಪ್ರಶ್ನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಅಹಿಂದ ವರ್ಗಗಳ ಸಂಘಟನೆಯಲ್ಲಿ ನಾನು ಪ್ರಮುಖ ಪಾತ್ರ ವಹಿಸಿದ್ದು, ಅವರಿಗೆ ಗ್ಯಾರಂಟಿ ಹಾಗೂ ಅನೇಕ ಭಾಗ್ಯಯೋಜನೆಗಳನ್ನು ನೀಡಿದ್ದೇವೆ. ಕಾರ್ಮಿಕರು, ಬಡವರು, ದಲಿತರು, ಅಲ್ಪಸಂಖ್ಯಾತರು, ಮಹಿಳೆಯರ ಸಬಲೀಕರಣಕ್ಕೆ ಗ್ಯಾರಂಟಿ ಸೇರಿದಂತೆ ಅನೇಕ ಯೋಜನೆಗಳಿಂದ ಅನುಕೂಲವಾಗಿದೆ. ಕುಮಾರಸ್ವಾಮಿಯವರು ರೈತರ ಕುಟುಂಬದವರೇ ಹೊರತು, ರೈತವರ್ಗಕ್ಕೆ ಅವರ ಕೊಡುಗೆಗಳೇನಿದೆ ಎಂದು ಪ್ರಶ್ನಿಸಿದರು.

ಜಿಎಸ್ ಟಿ ದರ ಕಡಿತದಿಂದ ರಾಜ್ಯಕ್ಕಾಗಿರುವ ನಷ್ಟದ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಇದುವರೆಗೂ ಧ್ವನಿ ಎತ್ತಿರುವುದಿಲ್ಲ ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಕೇಂದ್ರ ವಿತ್ತಸಚಿವರು 5300 ಕೋಟಿ ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು. ಈ ಘೋಷಣೆಯಲ್ಲಿ ಹಿಂದಿನ ಸರ್ಕಾರದವರು ತಮ್ಮ ಆಯವ್ಯಯದಲ್ಲಿಯೂ ಉಲ್ಲೇಖಿಸಿದರು. ಆದರೆ ಇದುವರೆಗೆ ಕೇಂದ್ರದಿಂದ ಈ ಅನುದಾನವನ್ನು ಬಿಡುಗಡೆ ಮಾಡಿಲ್ಲ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ಕೇಂದ್ರ ಸರ್ಕಾರದ ಅಧೀನದಲ್ಲಿದ್ದು, ರಾಜ್ಯದ ಪ್ರಮುಖ ಯೋಜನೆಗೆ ಇದುವರೆಗೆ ಅನುಮತಿ ದೊರೆತಿಲ್ಲ. ಇದರಿಂದ ಮಂಡ್ಯ ಜನರಿಗೆ ಅನ್ಯಾಯವಾಗಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande