ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಬಹುಜನರಿಗೆ ಅತ್ಯಂತ ಮುಖ್ಯ : ಮಾಯಾವತಿ
ನವದೆಹಲಿ, 06 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬಿಎಸ್‌ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಅವರು ಚುನಾವಣಾ ಆಯೋಗದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಬಹುಜನ ಸಮಾಜಕ್ಕೆ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿ, ಉತ್ಸಾಹದಿಂದ ಹಾಗೂ ಜಾಗೃತಿಯಿಂದ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಬಾಬಾ ಸ
Mayavatti


ನವದೆಹಲಿ, 06 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಬಿಎಸ್‌ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಅವರು ಚುನಾವಣಾ ಆಯೋಗದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಬಹುಜನ ಸಮಾಜಕ್ಕೆ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿ, ಉತ್ಸಾಹದಿಂದ ಹಾಗೂ ಜಾಗೃತಿಯಿಂದ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುಣ್ಯತಿಥಿ ದಿನದಂದು ದೆಹಲಿಯ ನಿವಾಸದಲ್ಲಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದ ಅವರು, ದೇಶದ ಲಕ್ಷಾಂತರ ದಲಿತರು–ಹಿಂದುಳಿದ ವರ್ಗಗಳ “ಒಳ್ಳೆಯ ದಿನಗಳು ಇನ್ನೂ ಬರಲಿಲ್ಲ” ಎಂದು ಆತಂಕ ವ್ಯಕ್ತಪಡಿಸಿದರು. ಸಂವಿಧಾನದಲ್ಲಿ ನೀಡಿರುವ ಹಕ್ಕುಗಳಿದ್ದರೂ, ಬಹುಜನರನ್ನು ಅಧಿಕಾರದಿಂದ ದೂರವಿಡಲು ರಾಜಕೀಯ ಪಿತೂರಿಗಳು ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ.

ಈ ಪರಿಸ್ಥಿತಿಯನ್ನು ತಿರುಗಿಸಲು ಮತದ ಶಕ್ತಿಯನ್ನು ಗುರುತಿಸಿ, ಪ್ರತಿಯೊಬ್ಬರೂ ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಭಾಗವಹಿಸುವುದು ಅತ್ಯಗತ್ಯವೆಂದು ಮಾಯಾವತಿ ಒತ್ತಿ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande