
ಶಿವಮೊಗ್ಗ, 07 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ ಅಂಗವಾಗಿ ಧ್ವಜ ಬಿಡುಗಡೆ ಸಮಾರಂಭವನ್ನು ಡಿ.08 ರಂದು ಬೆಳಿಗ್ಗೆ 11 ಘಂಟೆಗೆ ಶಿವಮೊಗ್ಗ ಜಿಲ್ಲಾ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಆಯೋಜಿಸಿದ್ದು, ಜಿಲ್ಲಾಧಿಕಾರಿಗಳು ಧ್ವಜ ಬಿಡುಗಡೆಗೊಳಿಸುವರು.
ಈ ಸಮಾರಂಭದಲ್ಲಿ ಶಿವಮೊಗ್ಗ ಜಿಲ್ಲೆಯ ಮಾಜಿ ಸೈನಿಕರು, ವೀರ ನಾರಿಯರು ಹಾಗೂ ಮಾಜಿ ಸೈನಿಕರ ಅವಲಂಬಿತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa