
ನವದೆಹಲಿ, 07 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಸಶಸ್ತ್ರ ಪಡೆಗಳ ಧ್ವಜ ದಿನದ ಅಂಗವಾಗಿ ದೇಶದ ಸುರಕ್ಷತೆಗಾಗಿ ಅಚಲ ಧೈರ್ಯದಿಂದ ಸೇವೆ ಸಲ್ಲಿಸುತ್ತಿರುವ ವೀರ ಯೋಧರು, ನಿವೃತ್ತ ಸೈನಿಕರು ಮತ್ತು ಅವರ ಕುಟುಂಬಗಳಿಗೆ ರಾಷ್ಟ್ರದ ಪರವಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸಲಾಗಿದೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶೇಷ ಸಂದೇಶ ಬಿಡುಗಡೆ ಮಾಡಿ, ಸೈನಿಕರ ತ್ಯಾಗ, ಶಿಸ್ತು ಮತ್ತು ಕರ್ತವ್ಯನಿಷ್ಠೆಯನ್ನು ಶ್ಲಾಘಿಸಿದ್ದಾರೆ.
ಪ್ರಧಾನಮಂತ್ರಿ ತಮ್ಮ ಸಂದೇಶದಲ್ಲಿ, “ನಮ್ಮ ಸಶಸ್ತ್ರ ದಳಗಳ ಧೈರ್ಯ, ದೃಢನಿಶ್ಚಯ ಮತ್ತು ಅಪ್ರತಿಹತ ಮನೋಬಲವು ದೇಶದ ಶಾಂತಿ ಮತ್ತು ಸುರಕ್ಷತೆಗೆ ಬಲವಾದ ಆಧಾರ. ಅವರು ತೋರಿಸುವ ಶಿಸ್ತು ಮತ್ತು ಸೇವಾಭಾವ ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿ,” ಎಂದು ತಿಳಿಸಿದ್ದಾರೆ.
ಸೈನಿಕರ ಕಲ್ಯಾಣಕ್ಕಾಗಿ ರೂಪಿಸಲಾದ ಸಶಸ್ತ್ರ ಪಡೆಗಳ ಧ್ವಜ ದಿನ ನಿಧಿಗೆ ನಾಗರಿಕರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ದಾನ ನೀಡುವಂತೆ ಅವರು ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa