
ಬೆಳಗಾವಿ, 07 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಮಂಗಳವಾರ ಬಿಜೆಪಿ ಬೃಹತ್ ಪ್ರತಿಭಟನೆಯ ಮುಖಾಂತರ ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಪದಾಧಿಕಾರಿಗಳು ಪ್ರತಿಭಟನೆಗಾಗಿ ಬೆಳಗಾವಿಯಲ್ಲಿ ಸ್ಥಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಪ್ರತಿ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಬೆಳಗಾವಿ ಗ್ರಾಮಾಂತರ ಅಧ್ಯಕ್ಷ ಸುಭಾಷ್ ಪಾಟೀಲ್, ರಾಜ್ಯ ಮಾಧ್ಯಮ ಸಹ ಸಂಚಾಲಕ ಪ್ರಶಾಂತ್ ಕೆಡೆಂಜಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa