
ಜಶ್ಪುರ, 07 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಛತ್ತೀಸ್‌ಗಢದ ಜಶ್‌ಪುರ ರಾಷ್ಟ್ರೀಯ ಹೆದ್ದಾರಿ–43 ರ ಪತ್ರಟೋಲಿ ಬಳಿ ಶನಿವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರು ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಟ್ರೇಲರ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಕಾರು ಸಂಪೂರ್ಣ ಛಿದ್ರಗೊಂಡಿದ್ದು ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತವು ದುಲ್ದುಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾರು ಕುಂಕುರಿಯಿಂದ ಜಶ್ಪುರ ಕಡೆಗೆ ಪ್ರಯಾಣಿಸುತ್ತಿದ್ದುದಾಗಿ ಪ್ರಾಥಮಿಕ ಮಾಹಿತಿ ತಿಳಿಸಿದೆ. ಮೃತರು ಚರೈದಂಡ್ ಪ್ರದೇಶದ ನಿವಾಸಿಗಳೆಂದು ಗುರುತಿಸಲಾಗಿದ್ದು, ಅವರ ಕುಟುಂಬಗಳನ್ನು ಸಂಪರ್ಕಿಸುವ ಕೆಲಸ ಪ್ರಗತಿಯಲ್ಲಿದೆ ಎಂದು ಪೋಲಿಸ ಅಧಿಕಾರಿ ಕೆ.ಕೆ. ಸಾಹು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa