
ಬೆಳಗಾವಿ, 07 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ 19 ಗ್ರಾಮಗಳ 39 ಕೆರೆಗಳಿಗೆ ಕೃಷ್ಣಾ ನದಿಯಿಂದ ನೀರು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆ ಕಾಮಗಾರಿಯನ್ನು ಯಶಸ್ವಿಯಾಗಿ ಪೂರ್ಣಗೊಂಡಿದ್ದು ಇಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅಧಿಕೃತವಾಗಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ₹100 ಕೋಟಿ ಅನುದಾನದಿಂದ ಬಾವನ–ಸೌಂದತ್ತಿ ಗ್ರಾಮ ಸಮೀಪ ಕೃಷ್ಣಾ ನದಿಯ ದಡದಲ್ಲಿ ಪೂರ್ಣಗೊಂಡ ಈ ಮಹತ್ವಾಕಾಂಕ್ಷಿ ಯೋಜನೆ, ಕೃಷಿ ಅಭಿವೃದ್ಧಿಗೆ ಹೊಸ ದಿಕ್ಕುನೀಡುವಂತಿದೆ. ಭೂಗರ್ಭ ಜಲಮಟ್ಟ ಹೆಚ್ಚಿಸಲು, ರೈತರ ಆರ್ಥಿಕ ಸ್ಥಿರತೆಯನ್ನು ಬಲಪಡಿಸಲು ಮತ್ತು ಗ್ರಾಮೀಣ ಜೀವನಮಟ್ಟವನ್ನು ಸುಧಾರಿಸಲು ಈ ಯೋಜನೆ ದೊಡ್ಡ ಮಟ್ಟದಲ್ಲಿ ನೆರವಾಗಲಿದೆ ಎಂದರು.
ರಾಯಬಾಗ ತಾಲೂಕಿನ ಸಾವಿರಾರು ಎಕರೆ ಕೃಷಿಭೂಮಿಗೆ ಹೊಸ ಪ್ರಾಣ ತುಂಬುವ ಈ ಯೋಜನೆ, ತಾಲೂಕಿನ ಗ್ರಾಮೀಣ ಅಭಿವೃದ್ಧಿಯತ್ತ ಮತ್ತೊಂದು ಐತಿಹಾಸಿಕ ಹೆಜ್ಜೆಯಾಗಿ ಪರಿಣಮಿಸಿದ್ದು, ಸ್ಥಳೀಯ ಕೃಷಿಕರ ಭವಿಷ್ಯಕ್ಕೆ ಭರವಸೆಯ ಬೆಳಕಾಗಿದೆ ಎಂದು ಸಚಿವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa