
ಮಂಡ್ಯ, 07 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ನಾಗತಿಹಳ್ಳಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ಮೂರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಚಿಕ್ಕಮಗಳೂರು ಮೂಲದ ಚನ್ನೆಗೌಡ, ಸರೋಜಮ್ಮ ಹಾಗೂ ಜಯಮ್ಮ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಕಾರಿನಲ್ಲಿ ತೆರಳುವ ಸಂದರ್ಭದಲ್ಲಿ, ತಿರುವಿನ ಬಳಿ ವಾಹನದ ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಗುದ್ದಿ ಕಾರು ಪಲ್ಟಿಯಾಗಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಅಪಘಾತ ಕುರಿತು ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa