
ಬೆಂಗಳೂರು, 07 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಗಾಂಧಿನಗರ ವಿಧಾನ ಸಭಾ ಕ್ಷೇತ್ರದ ದತ್ತಾತ್ರೇಯ ವಾರ್ಡ್‌ನಲ್ಲಿಂದು ಆರ್. ಗುಂಡೂರಾವ್ ಫೌಂಡೇಶನ್ (ರಿ) ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ಹಾಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕ್ಷೇತ್ರದ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ಮೂಲಕ ಅವರು ಶೈಕ್ಷಣಿಕ ಪ್ರಗತಿ ಸಾಧಿಸಲು ಜೊತೆ ನಿಲ್ಲಬೇಕು ಎಂಬ ಉದ್ದೇಶದಿಂ ಎಲ್.ಕೆ.ಜಿ ಯಿಂದ ಹತ್ತನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು ನೀಡಲಾಗಿದೆ ಎಂದರು.
ಇಂದಿನ ವಿದ್ಯಾರ್ಥಿ ಯುವಜನರೇ ಮುಂದೆ ಸಮಾಜವನ್ನು ಮುನ್ನೆಡೆಸುವ ಸಾಧಕರು, ನಾಯಕರು ಹಾಗೂ ಪ್ರಜ್ಞಾವಂತ ನಾಗರೀಕರು. ಹಾಗಾಗಿ ಅವರ ಬೆಳವಣಿಗೆಯ ಹಂತದಲ್ಲಿ ಬೌದ್ದಿಕ, ಶೈಕ್ಷಣಿಕ, ಮಾನಸಿಕ ಬೆಳವಣಿಗೆಗೆ ಹೆಚ್ಚು ಒತ್ತು ಕೊಡುವಂತೆ ಪೋಷಕರೊಂದಿಗೆ ಸಮಾಲೋಚನೆ ನಡೆಸುವ ಸಂದರ್ಭದಲ್ಲಿ ಸಲಹೆ ನೀಡಿ, ಕ್ಷೇತ್ರದ ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa