ಭೀಕರ ರಸ್ತೆ ಅಪಘಾತ ; ಇಬ್ಬರು ಯುವಕರ ದಾರುಣ ಸಾವು
ಗದಗ, 07 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಗದಗ ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಬೆಳಕಿಗೆ ಬಂದಿದೆ. ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಗುದ್ದಿದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಬ
ಫೋಟೋ


ಗದಗ, 07 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಗದಗ ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಬೆಳಕಿಗೆ ಬಂದಿದೆ. ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಗುದ್ದಿದ ಪರಿಣಾಮ ಈ ದುರಂತ ಸಂಭವಿಸಿದೆ.

ಅಪಘಾತದಲ್ಲಿ ಬಸವರಾಜ ಕಮ್ಮಾರ (35) ಹಾಗೂ ಪ್ರಶಾಂತ ಬಡಿಗೇರ್ (21) ಅಫಘಾತಕ್ಕೆ ಬಲಿಯಾಗಿರುವವರು. ಮೃತರು ಸಂಬಂಧಿಕರ ಮನೆಗೆ ಮದುವೆ ಆಮಂತ್ರಣ ನೀಡಿ ವಾಪಸ್ ಬರುತ್ತಿದ್ದ ವೇಳೆ ದುರ್ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ರಾತ್ರಿಯ ವೇಳೆಯಲ್ಲಿ ಟ್ರ್ಯಾಕ್ಟರ್‌ ರಸ್ತೆಯ ಅಂಚಿನಲ್ಲಿ ನಿಲ್ಲಿಸಲಾಗಿದ್ದುದರಿಂದ ಅದು ಸ್ಪಷ್ಟವಾಗಿ ಗೋಚರಿಸದೇ ಬೈಕ್ ನೇರವಾಗಿ ಡಿಕ್ಕಿಹೊಡೆದಿರುವುದು ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಮುಳಗುಂದ ಹಾಗೂ ಗದಗ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಸ್ಥಳೀಯರು ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande