
ವಿಜಯಪುರ, 08 ಡಿಸೆಂಬರ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನ ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯಡಿ ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆಯಡಿ ಜವಳಿ ಕ್ಷೇತ್ರದ ಸಣ್ಣ ಹಾಗೂ ಅತಿ ಸಣ್ಣ ಎಸ್.ಎಂ.ಇ ಘಟಕ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 20ರವರೆಗೆ ವಿಸ್ತರಿಸಲಾಗಿದೆ.
ಜವಳಿ ಕ್ಷೇತ್ರದ ಸಣ್ಣ ಹಾಗೂ ಅತಿ ಸಣ್ಣ ಎಸ್ ಎಂ ಇ ಘಟಕ ಸ್ಥಾಪಿಸಲು ಇಚ್ಛಿಸುವ ಪರಿಶಿಷ್ಟ ಜಾತಿ ಹಾಗೂ ಪ.ಪಂಗಡದವರು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಡಿಐಸಿ ಕಟ್ಟಡ ಆವರಣ, ಶಿಕಾರಖಾನೆ ವಿಜಯಪುರ ಕಚೇರಿಗೆ ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ: 9902561441 ಹಾಗೂ 9538114434 ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande