ವಾಷಿಂಗ್ಟನ್, 10 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಉಕ್ಕು ಮತ್ತು ಅಲ್ಯೂಮಿನಿಯಂ ಆಮದಿನ ಮೇಲೆ ಶೇಕಡಾ 25 ರಷ್ಟು ಸುಂಕ ವಿಧಿಸಬಹುದು. ಇದು ದೇಶದ ವ್ಯಾಪಾರ ವ್ಯವಸ್ಥೆಯಲ್ಲಿನ ರಚನಾತ್ಮಕ ಬದಲಾವಣೆಯ ಭಾಗವಾಗಿದೆ ಎಂದು ಅವರು ತಿಳಿಸಿದ್ದಾರೆ. ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಿದ ಭರವಸೆಯನ್ನು ಈಡೇರಿಸುವ ಸಮಯ ಬಂದಿದೆ ಎಂದು ಟ್ರಂಪ್ ಹೇಳಿದ್ದಾರೆ.
ವಾಲ್ ಸ್ಟ್ರೀಟ್ ಜರ್ನಲ್ ಪತ್ರಿಕೆಯ ಸುದ್ದಿಯ ಪ್ರಕಾರ, ಅಮೆರಿಕ ಅಧ್ಯಕ್ಷರು ಮಂಗಳವಾರ ಅಥವಾ ಬುಧವಾರ ಈ ಘೋಷಣೆ ಮಾಡಬಹುದು. ಅಮೆರಿಕದ ಕೈಗಾರಿಕೆಗಳನ್ನು ರಕ್ಷಿಸುವುದು ಮತ್ತು ವ್ಯಾಪಾರ ಸಮತೋಲನವನ್ನು ಸುಧಾರಿಸುವುದು ಇದರ ಹಿಂದಿನ ಉದ್ದೇಶ ಎಂದು ಟ್ರಂಪ್ ಹೇಳಿದ್ದಾರೆ. ಭಾನುವಾರ ನ್ಯೂ ಓರ್ಲಿಯನ್ಸ್‌ನಲ್ಲಿ ಏರ್ ಫೋರ್ಸ್ ಒನ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಟ್ರಂಪ್ ಈ ಮಾಹಿತಿ ನೀಡಿದ್ದಾರೆ. ಇದು ಎಲ್ಲಾ ದೇಶಗಳಿಗೂ ಅನ್ವಯಿಸುತ್ತದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa