ಕಳಪೆ ಬಿತ್ತನೆ ಬೀಜ ಪೂರೈಕೆ ಮಾಡಿದ ಕಂಪನಿಗಳ ವಿರುದ್ದ ಕ್ರಮಕ್ಕೆ ರೈತ ಸಂಘ ಒತ್ತಾಯ
ಕಳಪೆ ಬಿತ್ತನೆ ಬೀಜ ಪೂರೈಕೆ ಮಾಡಿದ ಕಂಪನಿಗಳ ವಿರುದ್ದ ಕ್ರಮಕ್ಕೆ ರೈತ ಸಂಘ ಒತ್ತಾಯ
ಚಿತ್ರ: ಕಳಪೆ ಬೀಜ ಪೂರೈಕೆ ಕಂಪನಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಕಛೇರಿಯ ಮುಂದೆ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.


ಕೋಲಾರ, ೧೨ ಫೆಬ್ರವರಿ (ಹಿ.ಸ.) :

ಆ್ಯಂಕರ್ : ಟೊಮೇಟೊ ಕ್ಯಾಪ್ಸಿಕಂಗೆ ಬಾದಿಸುತ್ತಿರುವ ರೋಗ ನಿಯಂತ್ರಣಕ್ಕೆ ಗುಣಮಟ್ಟದ ಔಷಧಿ ವಿತರಣೆ ಮಾಡಿ ಕಳಪೆ ಬೀಜ ಕಂಪನಿಗಳ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ರೈತ ಸಂಘದಿಂದ ಮುಳಬಾಗಿಲು ಕೃಷಿ ಸಹಾಯಕ ನಿರ್ದೇಶಕರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು

ಟೊಮೋಟೊ ಕ್ಯಾಪ್ಸಿಕಂ ಋತುಮಾನ ಪ್ರಾರಂಭವಾಗಿದ್ದು ಗುಣಮಟ್ಟದ ಬಿತ್ತನೆ ಬೀಜ ಕೀಟ ನಾಶಕ ವಿತರಣೆ ಮಾಡುವಂತೆ ಔಷದಿ ಅಂಗಡಿಗಳ ಮಾಲೀಕರ ಸಭೆ ಕರೆದು ಸೂಚನೆ ನೀಡುವ ಜೊತೆಗೆ ಅನಧಿಕೃತ ನರ್ಸರಿಗಳ ವಿರುದ್ದ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲು ತೋಟಗಾರಿಕೆ ಅಧಿಕಾರಿಗಳಿಗೆ ಸೂಚಸಿಬೇಕೆಂದು ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಅಧಿಕಾರಿಗಳನ್ನು ಒತ್ತಾಯಿಸಿದರು.

ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ೩ ತಿಂಗಳು ಬೆವರು ಸುರಿಸಿ ದುಡಿಯುವ ರೈತರಿಗೆ ನಕಲಿ ಬಿತ್ತನೆ ಬೀಜಗಳನ್ನು ವಿತರಣೆ ಮಾಡಿ ಬೆಳೆ ನಷ್ಟವಾದರೆ ಆ ಕಂಪನಿಯ ಹಾಗೂ ಬೀಜ ವಿತರಣೆ ಮಾಡಿದ ಅಂಗಡಿ ಮಾಲೀಕರು ಮತ್ತು ಸುಳ್ಳು ವರದಿ ನೀಡುವ ವಿಜ್ಞಾನಿಗಳ ಆಸ್ತಿಯನ್ನು ಹರಾಜು ಹಾಕಿ ರೈತರಿಗೆ ಪರಿಹಾರ ನೀಡುವ ಕಾನೂನು ಜಾರಿ ಆಗಬೇಕೆಂದು ಕೃಷಿ ತೋಟಗಾರಿಕಾ ಮಂತ್ರಿಗಳನ್ನು ಒತ್ತಾಯಿಸಿದರು.

ಬಹುರಾಷ್ಟ್ರೀಯ ಔಷಧಿ ಕಂಪನಿಗಳು ವಿತರಣೆ ಮಾಡುತ್ತಿರುವ ಔಷಧಿಗಳ ಗುಣಮಟ್ಟ ಸಂಪೂರ್ಣವಾಗಿ ಕಳಪೆಯಾಗಿದೆ. ೧೦ ರೂಪಾಯಿ ಸೊಳ್ಳೆ ಬತ್ತಿ ಮನೆಯ ಸೊಳ್ಳೆಯನ್ನು ಸಾಯಿಸುತ್ತದೆ. ಆದರೆ, ಲಕ್ಷಾಂತರ ರೂಪಾಯಿ ನೀಡಿ ಖರೀದಿ ಮಾಡುವ ಔಷಧಿಗಳಿಂದ ರೋಗ ನಿಯಂತ್ರಣಕ್ಕೆ ಬಾರದೆ ರೈತನ ಆರೋಗ್ಯ ಹದಗೆಡುತ್ತದೆ. ಅಷ್ಟರ ಮಟ್ಟಿಗೆ ಔಷಧಿಗಳ ಗುಣಮಟ್ಟ ಕಳಪೆಯಾಗಿದೆ. ಇದನ್ನು ಸರಿಪಡಿಸಬೇಕಾದ ಅಧಿಕಾರಿಗಳು ಕಂಪನಿಗಳ ಜೊತೆ ಶಾಮೀಲಾಗಿ ರೈತರ ಹಣೆಬರಹವನ್ನು ತಿದ್ದುತ್ತಿದ್ದಾರೆಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಪಾರುಕ್ಪಾಷ ಮಾತನಾಡಿ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆ ಕಟ್ಟ ಕಡೆಯ ರೈತರನ್ನು ತಲುಪುತ್ತಿಲ್ಲ. ಮಳೆಯಾಧಾರಿತ ಬೆಳೆಗಳಿಗೆ ಮಾತ್ರ ಬೆಳೆ ವಿಮೆ ಸೀಮಿತವಾಗಿದ್ದು, ಲಕ್ಷಾಂತರ ಬಂಡವಾಳ ಹಾಕುವ ವಾಣಿಜ್ಯ ಬೆಳೆಗಳಾದ ಟೊಮೇಟೊ, ಕ್ಯಾಪ್ಸಿಕಂ ಮತ್ತಿತರರ ಬೆಳೆಗಳಿಗೆ ವಿಮೆ ಎಂಬುದು ಮರೀಚಿಕೆಯಾಗಿದೆ. ಪ್ರತಿಯೊಂದು ಬೆಳೆಗೂ ವಿಮಾ ಕಂಪನಿ ಪರಿಹಾರ ನೀಡುವ ಕಾನೂನು ಜಾರಿಯಾಗಬೇಕು. ಹಾಗೂ ಬೆಳೆ ವಿಮೆ ಪಾವತಿಸಿಕೊಳ್ಳಲು ಕೋಟ್ಯಾಂತರ ರೂಪಾಯಿ ಜಾಹಿರಾತಿಗಾಗಿ ಖರ್ಚು ಮಾಡುವ ಕೃಷಿ ಮಂತ್ರಿಗಳು ಬೆಳೆ ನಷ್ಟವಾದಾಗ ರೈತರಿಗೆ ಸಿಗುತ್ತದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಲು ವಿಶೇಷ ತಂಡ ರಚನೆ ಮಾಡಬೇಕು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್, ಭಾಸ್ಕರ್, ಸುನಿಲ್ಕುಮಾರ್, ರಾಜೇಶ್, ಶ್ರೀನಿವಾಸ್, ಶಿವಾರೆಡ್ಡಿ, ಅಂಬ್ಲಿಕಲ್ ಮಂಜುನಾಥ್, ರಾಮಕೃಷ್ಣಪ್ಪ, ಹೆಬ್ಬಣಿ ಆನಂದರೆಡ್ಡಿ, ಮಂಗಸಂದ್ರ ತಿಮ್ಮಣ್ಣ, ಭಾಗವಹಿಸಿದ್ದರು.

ಚಿತ್ರ: ಕಳಪೆ ಬೀಜ ಪೂರೈಕೆ ಕಂಪನಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಕಛೇರಿಯ ಮುಂದೆ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande