ನವದೆಹಲಿ, 12 ಫೆಬ್ರವರಿ (ಹಿ.ಸ.) :
ಆ್ಯಂಕರ್ : ರಾಮ ಜನ್ಮಭೂಮಿ ದೇವಾಲಯದ ಪ್ರಧಾನ ಅರ್ಚಕ ಮಹಂತ್ ಸತ್ಯೇಂದ್ರ ದಾಸ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಸಂತಾಪ ಸೂಚಿಸಿದ್ದಾರೆ. ಮಹಾಂತ ಸತ್ಯೇಂದ್ರ ದಾಸ್ ಜಿ ಅವರು ಧಾರ್ಮಿಕ ಆಚರಣೆಗಳು ಮತ್ತು ಧರ್ಮಗ್ರಂಥಗಳಲ್ಲಿ ಪರಿಣಿತರು, ಅವರು ತಮ್ಮ ಇಡೀ ಜೀವನವನ್ನು ಭಗವಾನ್ ಶ್ರೀ ರಾಮನ ಸೇವೆಗೆ ಮುಡಿಪಾಗಿಟ್ಟಿದ್ದಾರೆ ಎಂದು ಮೋದಿ ಶ್ಲಾಘಿಸಿದ್ದಾರೆ.
ಪ್ರಧಾನಮಂತ್ರಿಯವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಸಂತಾಪ ಸೂಚಿಸಿದ್ದು, ತಮ್ಮೊಂದಿಗೆ ಇರುವ ಹಳೆಯ ಫೋಟೋವನ್ನು ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ತಮ್ಮ ಶೋಕ ಸಂದೇಶದಲ್ಲಿ, “ರಾಮ ಜನ್ಮಭೂಮಿ ದೇವಾಲಯದ ಪ್ರಧಾನ ಅರ್ಚಕ ಮಹಂತ್ ಸತ್ಯೇಂದ್ರ ದಾಸ್ ಜಿ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಧಾರ್ಮಿಕ ಆಚರಣೆಗಳು ಮತ್ತು ಧರ್ಮಗ್ರಂಥಗಳಲ್ಲಿ ಪಾರಂಗತರಾಗಿದ್ದ ಮಹಂತ್ ಜೀ ಅವರು ತಮ್ಮ ಇಡೀ ಜೀವನವನ್ನು ಭಗವಾನ್ ಶ್ರೀ ರಾಮನ ಸೇವೆಗೆ ಮುಡಿಪಾಗಿಟ್ಟರು. ದೇಶದ ಆಧ್ಯಾತ್ಮಿಕ ಮತ್ತು ಸಾಮಾಜಿಕ ಜೀವನಕ್ಕೆ ಅವರ ಅಮೂಲ್ಯ ಕೊಡುಗೆಯನ್ನು ಸದಾ ಭಕ್ತಿಯಿಂದ ಸ್ಮರಿಸಲಾಗುತ್ತದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅನುಯಾಯಿಗಳಿಗೆ ದೇವರು ಶಕ್ತಿ ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಓಂ ಶಾಂತಿ! ಎಂದು ಸಂದೇಶ ಹಂಚಿಕೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa