ಮಾರ್ಸಿಲ್ಲೆ (ಫ್ರಾನ್ಸ್), 12 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್‌ಗೆ ಆಗಮಿಸಿದ್ದು, ಸ್ವಲ್ಪ ಸಮಯದ ಹಿಂದೆ ಮಾರ್ಸಿಲ್ಲೆ ತಲುಪಿದರು.
ಅವರೊಂದಿಗೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಕೂಡ ಇದ್ದಾರೆ.
ಇದಕ್ಕೂ ಮುನ್ನ, ಪ್ರಧಾನಿ ಮೋದಿ ನಿನ್ನೆ ಪ್ಯಾರಿಸ್‌ನಲ್ಲಿ ನಡೆದ ಕೃತಕ ಬುದ್ಧಿಮತ್ತೆ ಕ್ರಿಯಾ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದರು.
ಈ ಶೃಂಗಸಭೆಯಲ್ಲಿ ಭಾಗವಹಿಸಲು ಬಂದಿದ್ದ ಗೂಗಲ್ ಸಿಇಒ ಸುಂದರ್ ಪಿಚೈ ಅವರು ಪ್ರಧಾನಿ ಮೋದಿಯವರನ್ನು ಭೇಟಿಯಾದರು.
ಪ್ರಧಾನಿ ಮೋದಿಯವರನ್ನು ಭೇಟಿಯಾಗಲು ಸಂತೋಷಪಟ್ಟ ಪಿಚೈ, ಭಾರತದ ಸಹಯೋಗದೊಂದಿಗೆ ಗೂಗಲ್ ಕೃತಕ ಬುದ್ಧಿಮತ್ತೆಯ ಮೇಲೆ ದೊಡ್ಡ ಕೆಲಸ ಮಾಡಲಿದೆ ಎಂದು ತಿಳಿಸಿದರು.
ಇಂದು ಮುಂಜಾನೆ, ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಹಂಚಿಕೊಂಡಿದ್ದು “ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮತ್ತು ನಾನು ಸ್ವಲ್ಪ ಸಮಯದ ಹಿಂದೆ ಮಾರ್ಸಿಲ್ಲೆಗೆ ಬಂದೆವು. ಈ ಭೇಟಿಯ ಸಮಯದಲ್ಲಿ ಭಾರತ ಮತ್ತು ಫ್ರಾನ್ಸ್ ಅನ್ನು ಹತ್ತಿರಕ್ಕೆ ತರುವ ಗುರಿಯನ್ನು ಹೊಂದಿರುವ ಪ್ರಮುಖ ಕಾರ್ಯಕ್ರಮಗಳಿವೆ. ಉದ್ಘಾಟನೆಗೊಳ್ಳುತ್ತಿರುವ ಭಾರತೀಯ ದೂತಾವಾಸವು ಜನರ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ. ಮೊದಲ ಮತ್ತು ಎರಡನೇ ಮಹಾಯುದ್ಧದಲ್ಲಿ ಹುತಾತ್ಮರಾದ ಭಾರತೀಯ ಸೈನಿಕರಿಗೂ ನಾನು ಗೌರವ ಸಲ್ಲಿಸುತ್ತೇನೆ. ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa