ರಾಗಿ ಅಂಬಲಿ ಸೇವನೆಯಿಂದ ಸಿಗುವ ಪ್ರಯೋಜನಗಳು
ಹುಬ್ಬಳ್ಳಿ, 3 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬೇಸಿಗೆ ಕಾಲದಲ್ಲಿ ರಾಗಿ ಅಂಬಲಿ ಸೇವನೆಯಿಂದ ಹಲವಾರು ಪ್ರಯೋಜನಗಳಿದ್ದು ಸಂಪೂರ್ಣ ಮಾಹಿತಿ ಇಲ್ಲಿದೆ : ರಾಗಿ ಅಂಬಲಿಯು ದೇಹದ ತಾಪಮಾನವನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ಬೇಸಿಗೆ ಸಮಯದಲ್ಲಿ ಇದನ್ನು ಕುಡಿಯುವುದರಿಂದ ದೇಹ ತಂಪಾಗಿ ಇರುತ್ತದೆ. ರಾಗ
millet


ಹುಬ್ಬಳ್ಳಿ, 3 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಬೇಸಿಗೆ ಕಾಲದಲ್ಲಿ ರಾಗಿ ಅಂಬಲಿ ಸೇವನೆಯಿಂದ ಹಲವಾರು ಪ್ರಯೋಜನಗಳಿದ್ದು ಸಂಪೂರ್ಣ ಮಾಹಿತಿ ಇಲ್ಲಿದೆ :

ರಾಗಿ ಅಂಬಲಿಯು ದೇಹದ ತಾಪಮಾನವನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ಬೇಸಿಗೆ ಸಮಯದಲ್ಲಿ ಇದನ್ನು ಕುಡಿಯುವುದರಿಂದ ದೇಹ ತಂಪಾಗಿ ಇರುತ್ತದೆ.

ರಾಗಿ ಅಂಬಲಿ ಶಕ್ತಿ ತುಂಬುವ ಪಾನೀಯವಾಗಿದ್ದು. ಇದರಲ್ಲಿ ಕಾರ್ಬೋಹೈಡ್ರೇಟ್ಸ್ ಮತ್ತು ನೈಸರ್ಗಿಕ ಶಕ್ತಿ ತುಂಬಿರುವ ಪರಿಣಾಮ ದಿನವಿಡೀ ಉತ್ಸಾಹದಿಂದ ಇರಲು ಸಹಾಯ ಮಾಡುತ್ತದೆ.

ರಾಗಿ ಅಂಬಲಿಯಲ್ಲಿ ನಾರಿನಂಶ ಹೆಚ್ಚಿರುವುದರಿಂದ, ಜೀರ್ಣಕ್ರಿಯೆಗೆ ಸಹಕಾರಿ ಮತ್ತು ಮಲಬದ್ಧತೆಯನ್ನು ನಿವಾರಿಸುತ್ತದೆ.

ರಾಗಿ ಉತ್ಪನ್ನಗಳನ್ನು ನಿಯಮಿತವಾಗಿ ಸೇವಿಸುವದರಿಂದ ಮಧುಮೇಹದ ಅಪಾಯವನ್ನು ಕಡಿಮೆ ಮಾಡಬಹುದು.

ರಾಗಿ ಅಂಬಲಿಯಲ್ಲಿನ ಪೋಷಕಾಂಶಗಳು, ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande