ಹುಬ್ಬಳ್ಳಿ, 04 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಬಂದೂಕು ಸದ್ದು ಮಾಡಿದೆ. ಹುಬ್ಬಳ್ಳಿ ಹೊರವಲಯದ ರಿಂಗ್ ರೋಡ್‌ನಲ್ಲಿ ದರೋಡೆ, ನವನಗರ ಎಪಿಎಂಸಿಯಲ್ಲಿ ಅಂಗಡಿ ಹಾಗೂ ಗಬ್ಲೂರಿನಲ್ಲಿನ ಜೈನ ಮಂದಿರದಲ್ಲಿ ಕಳ್ಳತನ ಮಾಡಿದ್ದ ಅಂತರರಾಜ್ಯ ದರೋಡೆಕೋರರ ಮೇಲೆ ಪೋಲಿಸರು ಗುಂಡಿನ ದಾಳಿ ನಡೆಸಿ ಗುಜರಾತ ಮೂಲದ ದೀಲಿಪ ಮತ್ತು ನಿಲೇಶ ಎಂಬ ಇಬ್ಬರನ್ನು ಬಂಧಿಸಿದ್ದಾರೆ.
ಕಳೆದ ರಾತ್ರಿ ರಿಂಗ್ ರೋಡ್‌ನಲ್ಲಿ ಬೈಕ್ ಮೇಲೆ ಹೋಗುತ್ತಿದ್ದ ಇಬ್ಬರು ಸವಾರರನ್ನು ದರೋಡೆ ಮಾಡಿದ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸರು ನಾನಾ ಪ್ರದೇಶಗಳಲ್ಲಿ ನಾಕಾ ಬಂದಿ ಹಾಕಿ ಪರಿಶೀಲನೆ ಆರಂಭಿಸಿದ್ದರು. ಈ ವೇಳೆ ಐದ ರಿಂದ ಆರು ಜನರಿದ್ದ ದರೋಡೆಕೋರರು ವಾಹನ ನಿಲ್ಲಿಸದೇ ಪರಾರಿಯಾಗಲು ಯತ್ನಿಸಿದ್ದಾರೆ.
ಕೂಡಲೇ ಕಾರ್ಯಪ್ರವೃತ್ತರಾದ ಬೆಂಡಿಗೇರಿ ಠಾಣೆಯ ಇನ್ಸ್‌ಪೆಕ್ಟರ್ ಎಸ್ ಆರ್ ನಾಯಕ ಅವರಿಗೆ ದರೋಡೆಕೋರರು ರಿಂಗ್ ರೋಡ್ ಬಳಿಯ ಕಡಪಟ್ಟಿ ಹಳಿಯಾಳ ರಸ್ತೆಯ ಬಳಿ ಇರುವ ಮಾಹಿತಿ ಲಭ್ಯವಾಗಿತ್ತು.
ಬಂಧಿಸಲು ಹೋದಾಗ ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಇದರಿಂದಾಗಿ ಪೊಲೀಸರು ಆತ್ಮರಕ್ಷಣೆಗಾಗಿ ಇಬ್ಬರು ದರೋಡೆಕೋರರ ಕಾಲಿಗೆ ಗುಂಡೇಟು ನೀಡಿ ಬಂಧಿಸಿದ್ದಾರೆ.
ಘಟನೆಯಲ್ಲಿ ಮೂವರು ಪೋಲಿಸ್ ಸಿಬ್ಬಂದಿಗೆ ಗಾಯಗಳಾಗಿವೆ. ಗಾಯಗೊಂಡ ಪೋಲಿಸ್ ಸಿಬ್ಬಂದಿ ಹಾಗೂ ಆರೋಪಿಗಳನ್ನು ಚಿಕಿತ್ಸೆಗಾಗಿ ಕಿಮ್ಸ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa