ನವದೆಹಲಿ, 04 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಬೆಲ್ಜಿಯಂನ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಾರ್ಟ್ ಡಿ ವೆವರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಅಭಿನಂದಿಸಿದರು. ಭಾರತ-ಬೆಲ್ಜಿಯಂ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಮತ್ತು ಜಾಗತಿಕ ವಿಷಯಗಳಲ್ಲಿ ಸಹಕಾರವನ್ನು ಹೆಚ್ಚಿಸಲು ಒಟ್ಟಾಗಿ ಕೆಲಸ ಮಾಡುವ ವಿಶ್ವಾಸವನ್ನು ಮೋದಿ ವ್ಯಕ್ತಪಡಿಸಿದರು.
ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, “ಪ್ರಧಾನಿ ಬಾರ್ಟ್ ಡಿ ವೆವರ್ ಅವರಿಗೆ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಹೃತ್ಪೂರ್ವಕ ಅಭಿನಂದನೆಗಳು. ಭಾರತ-ಬೆಲ್ಜಿಯಂ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಮತ್ತು ಜಾಗತಿಕ ವಿಷಯಗಳಲ್ಲಿ ನಮ್ಮ ಸಹಕಾರವನ್ನು ಹೆಚ್ಚಿಸಲು ಒಟ್ಟಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ. ನಿಮ್ಮ ಅಧಿಕಾರಾವಧಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ” ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa