ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಾನೆ ಚಾಲನೆ
ಹಾವೇರಿ, 05 ಫೆಬ್ರವರಿ (ಹಿ.ಸ.) : ಆ್ಯಂಕರ್ : ಶಿರಸಿ-ಮೊಣಕಾಲ್ಮೂರು ರಾಜ್ಯ ಹೆದ್ದಾರಿಯಿಂದ ಹಾನಗಲ್ ತಾಲೂಕಿನ ಹರಳಕೊಪ್ಪ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು. ಮುಖ್ಯಮಂತ್ರಿಗಳ ವಿಶೇ
Development work


ಹಾವೇರಿ, 05 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಶಿರಸಿ-ಮೊಣಕಾಲ್ಮೂರು ರಾಜ್ಯ ಹೆದ್ದಾರಿಯಿಂದ ಹಾನಗಲ್ ತಾಲೂಕಿನ ಹರಳಕೊಪ್ಪ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.

ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ₹ 40 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ, ಸಿಡಿ ಹಾಗೂ ಚರಂಡಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಗ್ರಾಮದ ಕೂಡು ರಸ್ತೆ ಹಾಳಾಗಿದ್ದರಿಂದ ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದರು. ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದು ಗ್ರಾಮಸ್ಥರಿಗೆ ಅನುಕೂಲ ಆಗಲಿದೆ ಎಂದು ಮಾನೆ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande