ಬೆಂಗಳೂರು, 05 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಕೊಡಗು, ಚಿಕ್ಕಮಗಳೂರು, ಹಾಸನ ಹಾಗು ಸುತ್ತಮುತ್ತ ಆನೆ-ಮಾನವ ಸಂಘರ್ಷ ತಡೆಗಟ್ಟಲು ದೆಶೀಯವಾಗಿ ಅಭಿವೃದ್ಧಿಪಡಿಸಿದ ‘ಕೆ.ಪಿ. ಟ್ರ್ಯಾಕರ್’ ರೇಡಿಯೋ ಕಾಲರ್ ಲೋಕಾರ್ಪಣೆ ಮಾಡಲಾಗಿದೆ. ಇದು ಆನೆಗಳ ಚಲನ ವಲನ ಗಮನಿಸಿ, ಸ್ಥಳೀಯರಿಗೆ ಮುನ್ನೆಚ್ಚರಿಕೆ ನೀಡಲು ಸಹಾಯ ಮಾಡಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಇದು ಹಗುರ, ಪರಿಸರ ಸ್ನೇಹಿ ಮತ್ತು ಸಂಪೂರ್ಣವಾಗಿ ದೇಶೀಯ ತಂತ್ರಜ್ಞಾನ ಆಧಾರಿತ ಈ ಸಾಧನವು ವಿದೇಶಿ ಅವಲಂಬನೆ ಕಡಿಮೆ ಮಾಡಲಿದ್ದು, ವನ್ಯಜೀವಿ ಸಂರಕ್ಷಣೆಯಲ್ಲಿ ಮಹತ್ವದ ಹೆಜ್ಜೆ ಆಗಲಿದೆ. ಶೀಘ್ರದಲ್ಲೇ ಹುಲಿ ಮತ್ತು ಚಿರತೆಗಳಿಗೂ ಈ ತಂತ್ರಜ್ಞಾನ ಅಳವಡಿಸಲಾಗುವುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa