ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇಂದು ಚಾಲನೆ
ಬೆಂಗಳೂರು, 1 ಮಾರ್ಚ್ (ಹಿ.ಸ.): ಆ್ಯಂಕರ್ :೧೬ನೇ ಬೆಂಗಳೂರು ಅಂತಾರಾಷ್ಟ್ರಿಯ ಚಲನಚಿತ್ರೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಚಲನಚಿತ್ರೋತ್ಸವದ ರಾಯಭಾರಿ ಕಿಶೋರ್ ಕುಮಾರ್, ಪೋಲೆಂಡ್ ಮೌಗುಜ್ಹಾತ ವೈಸಿಸ್‌ಗೋವಿನ್ವಿಯಾಖ್, ನಟಿ
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇಂದು ಚಾಲನೆ


ಬೆಂಗಳೂರು, 1 ಮಾರ್ಚ್ (ಹಿ.ಸ.):

ಆ್ಯಂಕರ್ :೧೬ನೇ ಬೆಂಗಳೂರು ಅಂತಾರಾಷ್ಟ್ರಿಯ ಚಲನಚಿತ್ರೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಲಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಚಲನಚಿತ್ರೋತ್ಸವದ ರಾಯಭಾರಿ ಕಿಶೋರ್ ಕುಮಾರ್, ಪೋಲೆಂಡ್ ಮೌಗುಜ್ಹಾತ ವೈಸಿಸ್‌ಗೋವಿನ್ವಿಯಾಖ್, ನಟಿ ಪ್ರಿಯಾಂಕಾ ಮೋಹನ್, ಎಂ. ನರಸಿಂಹಲು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ನಟ ಶಿವರಾಜ್ ಕುಮಾರ್, ಚಲನಚಿತ್ರೋತ್ಸವದ ಕೈಪಿಡಿ ಹಾಗೂ ಕಿರುಹೊತ್ತಿಗೆ ಬಿಡುಗಡೆ ಮಾಡಲಿದ್ದಾರೆ.

ನಾಳೆ ಮಾರ್ಚ್ ೨ ರಂದು ಒರಾಯನ್ ಮಾಲ್ ಹನ್ನೊಂದು ಸ್ರೀನ್‌ಗಳಲ್ಲಿ ಚಲನಚಿತ್ರ ಪ್ರದರ್ಶನ ಆರಂಭವಾಗಲಿದೆ.

ಕಲಾಭವನ ಹಾಗೂ ಸುಚಿತ್ರ ಫಿಲ್ಮ್ ಸೊಸೈಟಿ ಚಿತ್ರಮಂದಿರಗಳಲ್ಲಿ ಪ್ರದರ್ಶನವಿದೆ. ಈಗಾಗಲೇ ೩ ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ನೊಂದಾಯಿಸಿಕೊಂಡಿದ್ದಾರೆ. ಮಾರ್ಚ್ ೮ರವರೆಗೂ ನಡೆಯಲಿರುವ ಚಲನಚಿತ್ರೋತ್ಸವದಲ್ಲಿ ಹೊಸ ತಂತ್ರಜ್ಞಾನದ ಮೂಲಕ ಸಿನಿಮಾ ತಯಾರಿಕೆ, ’ಎಐ’ತಂತ್ರಜ್ಞಾನದ ಬಳಕೆ ಕುರಿತು ಉಪನ್ಯಾಸ, ಮಹಿಳಾ ಚಲನಚಿತ್ರಗಳ ಬಗ್ಗೆ ಸಂವಾದ, ಚರ್ಚೆ ಕಾರ್ಯಕ್ರಮಗಳು ನಡೆಯಲಿವೆ.

---------------

ಹಿಂದೂಸ್ತಾನ್ ಸಮಾಚಾರ್ / Dr. Vara Prasada Rao PV


 rajesh pande