ಗದಗ, 10 ಮಾರ್ಚ್ (ಹಿ.ಸ.) :
ಆ್ಯಂಕರ್ : ಗದಗ ತಾಲೂಕಿನ ಮುಳಗುಂದ ಪಟ್ಟಣ 25 ಸಾವಿರಕ್ಕಿಂತಲೂ ಹೆಚ್ಚು ಜನಸಂಖ್ಯೆ ಹೊಂದಿದ್ದು, ಇಲ್ಲಿ ಕೇವಲ ಪ್ರಾಥಮಿಕ ಆರೋಗ್ಯ ಕೇಂದ್ರ ಮಾತ್ರ ಇರುವುದರಿಂದ 24 ತಾಸು ಆರೋಗ್ಯ ಸೇವೆ ದೊರೆಯದೇ ಸಾರ್ವಜನಿಕರು ಪರದಾಡುತ್ತಿದ್ದಾರೆ. ಮುಳಗುಂದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ಮಾತು ಮಾತಾಗೇ ಉಳಿದಿದ್ದು, ಸರಕಾರದ ಪ್ರಸ್ತಾವನೆಗೆ ಇನ್ನೂ ಚಾಲನೆ ದೊರೆಯದೇ ಇರುವುದು ದುರಾದೃಷ್ಟಕರ ಸಂಗತಿಯಾಗಿದೆ.
ಮುಳಗುಂದ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರ ಜನಸಾಮಾನ್ಯರಿಗೆ ಪ್ರಾಥಮಿಕ ಚಿಕಿತ್ಸೆಗಳನ್ನು ನೀಡುತ್ತಿದೆ. ಆದರೆ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆವರೆಗೆ ವೈದ್ಯಾಧಿಕಾರಿಗಳು ಇರುತ್ತಾರೆ. ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿದಲ್ಲಿ ಮುಳಗುಂದ ಪಟ್ಟಣಕ್ಕೆ 24 ತಾಸು ಆರೋಗ್ಯ ಸೇವೆ ದೊರೆಯಲಿದೆ.
ಮುಳಗುಂದ ಪಟ್ಟಣದಲ್ಲಿ ಹೆಚ್ಚಾಗಿ ಕೃಷಿ ಸಮುದಾಯದವರೇ ಇದ್ದು, ಇಲ್ಲಿನ ಬಡ-ಮಧ್ಯಮ ವರ್ಗದ ಜನರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರವೇ ಆಸರೆಯಾಗಿದೆ. ಸಮುದಾಯ ಆರೋಗ್ಯ ಕೇಂದ್ರವಾದರೆ 24 ಗಂಟೆ ಆರೋಗ್ಯ ಸೇವೆ ದೊರೆತು, ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕಿದೆ ಎಂದು ರೈತ ಸಂಘದ ಅಧ್ಯಕ್ಷ ದೇವರಾಜ ಸಂಗನಪೇಟಿ ಅವರು ಹೇಳಿದರು.
ಕಾರ್ಯನಿರ್ವಹಣೆ ಮಾಡುತ್ತಿದ್ದು ಈ ಸಮಯದ ನಂತರ ಹೆರಿಗೆಗೆ ಸಂಬಂಧಿಸಿದ ಸಿಬ್ಬಂದಿಗಳು ಮಾತ್ರ ಕಾರ್ಯನಿರ್ವಹಿಸುತ್ತಾರೆ. ಸಾರ್ವಜನಿಕರಿಗೆ 24 ತಾಸು ಸೇವೆ ಆರೋಗ್ಯ ಸೇವೆ ಸಿಗದೇ ಸಾಕಷ್ಟು ಸಮಸ್ಯೆಯಾಗುತ್ತಿದೆ. ಈ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಬೇಕು ಎಂಬ
ಕೂಗು ಸಾರ್ವಜನಿಕರಿಂದ ಕೇಳಿಬರುತ್ತಿದ್ದರೂ ಜನಪ್ರತಿನಿಧಿಗಳು ಕಣ್ಮುಚ್ಚಿ ಕುಳಿತಿದ್ದು ವಿಪರ್ಯಾಸ ಸಂಗತಿಯಾಗಿದೆ.
ಮುಳಗುಂದ ಪಟ್ಟಣಕ್ಕೆ ಸೇರಿರುವ ಶೀತಾಲಹರಿ, ಬಸಾಪೂರ ಗ್ರಾಮಕ್ಕೂ ಒಂದು ಉಪ ಕೇಂದ್ರ ಇಲ್ಲದೇ ಸಮಸ್ಯೆ ಎದುರಿಸುವಂತಾಗಿದೆ. ಸುಮಾರು ಹತ್ತು ವರ್ಷಗಳಿಂದ ಸಾಕಷ್ಟು ಸಂಘಟನೆಗಳು ಮನವಿ ಸಲ್ಲಿಸಿದರೂ ಸಹ ಜಿಲ್ಲಾ ಆರೋಗ್ಯಾಧಿಕಾರಿಯಾಗಲಿ, ತಾಲೂಕಾ ಆರೋಗ್ಯಾಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಗಮನ ಹರಿಸಿಲ್ಲ ಎಂಬ ಅಸಮಾಧಾನ ಸಾರ್ವಜನಿಕರಲ್ಲಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರವು ಹೆಸರಿಗಷ್ಟೇ ಆರೋಗ್ಯ ಕೇಂದ್ರ ಎವಂತಾಗಿದ್ದು, ಹಗಲಿನಲ್ಲಿ ಮಾತ್ರ ಸೇವೆ ದೊರೆಯುತ್ತದೆ. ರಾತ್ರಿ ಸಮಯದಲ್ಲಿ ಖಾಸಗಿ ಆಸ್ಪತ್ರೆಗೆ ಅಧಿಕ ಹಣ ನೀಡಿ ಚಿಕಿತ್ಸೆ ಪಡೆಯುವ ಸ್ಥಿತಿ ಎದುರಾಗಿದೆ. ಕೂಡಲೇ ಸಮಸ್ಯೆ ಬಗೆ ಹರಿಸಬೇಕಾಗಿದೆ.
ಹಿಂದೂಸ್ತಾನ್ ಸಮಾಚಾರ್ / Lalita MP