ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ ಕೇಂದ್ರ ಸರಕಾರ ಅನುಮೋದನೆ
ನವದೆಹಲಿ, 11 ಮಾರ್ಚ್ (ಹಿ.ಸ.) : ಆ್ಯಂಕರ್ : ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಕರ್ನಾಟಕದ ಬೆಳಗಾವಿ ಜಿಲ್ಲೆಯ ಸೌದತ್ತಿಯಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಯೋಜನೆಯನ್ನು ಪ್ರಸಾದ್ ಯೋಜನೆಯಡಿಯಲ್ಲಿ ಅನುಮೋದಿಸಿದೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿರುವ ಕೇಂದ್ರ ಪ
Temple


ನವದೆಹಲಿ, 11 ಮಾರ್ಚ್ (ಹಿ.ಸ.) :

ಆ್ಯಂಕರ್ : ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಕರ್ನಾಟಕದ ಬೆಳಗಾವಿ ಜಿಲ್ಲೆಯ ಸೌದತ್ತಿಯಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಯೋಜನೆಯನ್ನು ಪ್ರಸಾದ್ ಯೋಜನೆಯಡಿಯಲ್ಲಿ ಅನುಮೋದಿಸಿದೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿರುವ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರಸಿಂಗ್ ಶೇಖಾವತ್,

18.37 ಕೋಟಿ ರೂ. ವೆಚ್ಚದಲ್ಲಿ, ದೇವಾಲಯದಲ್ಲಿ ಯಾತ್ರಿಕರ ಆಗಮನ ಕೇಂದ್ರ, ಕೆಫೆಟೇರಿಯಾ, ಪ್ರಥಮ ಚಿಕಿತ್ಸಾ ಕೇಂದ್ರ ಮತ್ತು ಇತರ ಆಧುನಿಕ ಸೌಲಭ್ಯಗಳೊಂದಿಗೆ ಸಜ್ಜುಗೊಳ್ಳಲಿದ್ದು, ಇದು ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande