ಬೆಂಗಳೂರು, 11 ಮಾರ್ಚ್ (ಹಿ.ಸ.) :
ಆ್ಯಂಕರ್ : ಕರ್ನಾಟಕದ ರೈತರು, ವಿಶೇಷವಾಗಿ ಕಲ್ಯಾಣ ಕರ್ನಾಟಕ ಪ್ರದೇಶದ ರೈತರು ಬೆಳೆದ ಕೆಂಪು ಮೆಣಸಿನಕಾಯಿ ಬೆಲೆಗಳು ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ಕುಸಿದಿರುವುದರಿಂದ ಸಂಕಷ್ಟದಲ್ಲಿದ್ದಾರೆ. ಈ ಕುರಿತು ಕೇಂದ್ರ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದಾರೆ.
ಕೆಂಪು ಮೆಣಸಿನಕಾಯಿಗಳಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ (ಎಂಐಎಸ್) ಅಡಿಯಲ್ಲಿ ಬೆಲೆ ಕೊರತೆ ಪಾವತಿ (ಪಿಡಿಪಿ) ಯೋಜನೆಯನ್ನು ಕರ್ನಾಟಕಕ್ಕೂ ತಕ್ಷಣ ವಿಸ್ತರಿಸಬೇಕೆಂದು ಒತ್ತಾಯಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa