ಕೋಲಾರ, ೧೧ ಮಾರ್ಚ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು ರಾಜ್ಯದ ಜನರ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುವು ದರೊಂದಿಗೆ ಅವರಿಗೆ ನೆಮ್ಮದಿ ನೀಡಿ ಸಮಾಜಿಕ ಪರಿವರ್ತನೆಗೆ ಕಾರಣವಾಗಿದೆ. ಈ ಯೋಜನೆ ಗಳು ದೇಶಕ್ಕೆ ಮಾದರಿಯಾಗಿವೆ ಎಂದು ನಗರಾ ಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ರಾದ ಬಿ.ಎಸ್. ಸುರೇಶ್ ಅವರು ತಿಳಿಸಿದರು.
ವಿಧಾನ ಸೌಧದಲ್ಲಿ ಕೋಲಾರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಕುರಿತಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರ ತಂದಿರುವ ಕಿರುಹೊತ್ತಿಗೆಯನ್ನು ಲೋಕಾ ರ್ಪಣೆಗೊಳಿಸಿ ಅವರು ಮಾತನಾಡಿದರು.
ಗ್ಯಾರಂಟಿ ಯೋಜನೆಯ ಕುರಿತು ಪ್ರತಿ ತಾಲ್ಲೂಕಿನಲ್ಲಿ ಮಾಹಿತಿ ಕಲೆಹಾಕಿ ಪಲಾನುಭವಿಗಳ ಅನಿಸಿಕೆಗಳೊಂದಿಗೆ ಕಿರುಹೊತ್ತಿಗೆ ಮೂಡಿ ಬಂದಿದೆ. ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತ ಸಮಗ್ರ ಮಾಹಿತಿಯನ್ನು ಒಳಗೊಂಡು ಸುಂದರವಾಗಿ ರೂಪುಗೊಂಡಿರುವ ಈ ಕಿರುಹೊತ್ತಿಗೆಯು ಸಂಗ್ರಹಯೋಗ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಪಂಚ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ದೊರುಕುವಂತೆ ನೋಡಿಕೊಳ್ಳುವುದು ನಮ್ಮ ಆಧ್ಯ ಕರ್ತವ್ಯವಾಗಿದೆ. ಕೆಲವು ಸಣ್ಣ-ಪುಟ್ಟ ನ್ಯೂನತೆಗಳಿಂದ ವಂಚಿತರಾದವರಿಗೆ ನ್ಯಾಯ ಕೊಡಿಸುವ ಕೆಲಸ ಆಗಬೇಕಾಗಿದೆ ಎಂದರು.
ಜಿಲ್ಲೆಯ ಪಂಚಗ್ಯಾರಂಟಿ ಯೋಜನೆಯ ಫಲಾನುಭವಿಗಳ ಅಂಕಿ-ಅಂಶಗಳನ್ನು ಗಮನಿಸಿದಾಗ ಜಿಲ್ಲೆಯಲ್ಲಿ ಅಧಿಕ ಫಲಾನುಭವಿಗಳು ಇರುವುದು ಕಂಡು ಬಂದಿದೆ. ಪ್ರತಿಶತ ನೂರರಷ್ಟು ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳು ತಲುಪಬೇಕು. ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಮನೆ-ಮನೆಗೆ ಭೇಟಿ ನೀಡಿ ಗ್ಯಾರಂಟಿ ಯೋಜನೆ ಪ್ರತಿಯೊಬ್ಬರಿಗೂ ತಲುಪಿದೆ ಎಂಬ ಬಗ್ಗೆ ಖಚಿತಪಡಿಸಿಕೊಳ್ಳಬೇಕೆಂದರು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಮಾತನಾಡಿ ರಾಜ್ಯದಲ್ಲಿ ಪಂಚಗ್ಯಾರಂಟಿಗಳು ಜಾರಿಯಾಗಿ, ೨ವರ್ಷಗಳ ಹೊಸ್ತಿಲಲ್ಲಿದೆ. ಆರ್ಥಿಕ ಸಂಕಷ್ಟದ ಮದ್ಯೆಯೂ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಗೃಹಜ್ಯೋತಿ, ಶಕ್ತಿ, ಗೃಹಲಕ್ಷ್ಮಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳ ಫಲಾನುಭವಿಗಳು ಪಡೆಯುತ್ತಿರುವ ಪ್ರಯೋಜನ ಕುರಿತು ಸಮೀಕ್ಷೆ ನಡೆಸಲಾಗುತ್ತಿದೆ ಎಂದರು.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಮುಂದು ವರೆಸುವ ಸೂಚನೆಯಾಗಿ ರಾಜ್ಯ ಬಜೇಟ್ ನಲ್ಲಿಯೂ ರೂ.೫೧,೩೦೦ ಕೋಟಿಗಳ ಅನುದಾನ ವನ್ನು ಮೀಸಲಿಸಲಾಗಿದೆ. ಈ ಯೋಜನೆಗಳಿಂದ ತುಂಬ ಜನರಿಗೆ ಅನುಕೂಲವಾಗಿದೆ. ಕೋಲಾರ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗಾಗಿ ಸುಮಾರು ೯೦೦ ಕೋಟಿಗಳನ್ನು ವೆಚ್ಚ ಮಾಡಲಾಗಿದೆ ಎಂದರು.
ಗೃಹಜ್ಯೋತಿ ಯೋಜನೆಯಡಿ ೪ಲಕ್ಷಕ್ಕೂ ಅಧಿಕ ಬಳಕೆದಾರರಿಗೆ ಶೂನ್ಯ ವಿದ್ಯುತ್ ಬಿಲ್ ಪಾವತಿ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ೧೬ಕೋಟಿಗೂ ಅಧಿಕ ಮೊತ್ತದ ಹಣವನ್ನು ವಿನಿಯೋಗಿಸಲಾಗಿದೆ. ಕಳೆದ ಎರಡು ವರ್ಷಗಳಲ್ಲಿ ಜಿಲ್ಲೆಯ ಶೇ.೫೨ರಷ್ಟು ಮಹಿಳೆಯರು ಉಚಿತವಾಗಿ ಬಸ್ನಲ್ಲಿ ಪ್ರಯಾಣಿಸಿದ್ದಾರೆ. ಸಾರಿಗೆ ಇಲಾಖೆಗೆ ಪ್ರತಿನಿತ್ಯ ಸರಾಸರಿ ಒಟ್ಟಾರೆ ಆದಾಯ ೮೫ಲಕ್ಷಗಳು ಸಂದಾಯವಾಗುತ್ತಿದೆ ಎಂದರು.
ಯುವನಿಧಿ ಯೋಜನೆಯಡಿ ೪೦೦೨ ವಿದ್ಯಾರ್ಥಿಳು ನೋಂದ ಣಿಯಾಗಿದ್ದು, ೩೭೯೮ ವಿದ್ಯಾರ್ಥಿಗಳಿಗೆ ಉತ್ತಮ ಜೀವನ ರೂಪಿಸಿಕೊಳ್ಳಲು ಉಪಯೋಗವಾಗಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಜಿಲ್ಲೆಯ ಪ್ರತಿ ಕುಟುಂಬಕ್ಕೆ ವಾರ್ಷಿಕ ೫೦ ರಿಂದ ೫೫ ಸಾವಿರ ರೂಗಳ ನಗದು ಪ್ರಯೋಜನ ವನ್ನು ನಮ್ಮ ಸರ್ಕಾರ ಒದಗಿಸುತ್ತಿದೆ. ಎಲ್ಲಾ ಮಹಿಳೆಯರು, ಎಲ್ಲಾ ಬಡವರು ಅವರಿಗೆ ಸಹಾಯ ಮಾಡಬೇಕೆಂಬುದೆ ಗ್ಯಾರಂಟಿ ಯೋಜನೆಗಳ ಉದ್ದೇಶವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಡಾ.ಎಂ.ಸಿ.ಸುಧಾಕರ, ಶಿವಾನಂದ ಪಾಟೀಲ್, ಬ್ಯಾಡಗಿ ಶಾಸಕರಾದ ಬಸವರಾಜ್ ಶಿವಣ್ಣನವರ್ ಉಪಸ್ಥಿತರಿದ್ದರು.
ಚಿತ್ರ : ವಿಧಾನ ಸೌಧದಲ್ಲಿ ಕೋಲಾರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಕುರಿತಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರ ತಂದಿರುವ ಕಿರುಹೊತ್ತಿಗೆಯನ್ನು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ರಾದ ಬಿ.ಎಸ್. ಸುರೇಶ್ ಲೋಕಾರ್ಪಣೆಗೊಳಿಸಿದರು.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ