ಕಲಬುರಗಿ, 12 ಮಾರ್ಚ್ (ಹಿ.ಸ.) :
ಆ್ಯಂಕರ್ : ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಚಿಂಚೋಳಿ ಹೆಚ್ ಗ್ರಾಮ ಪಂಚಾಯತಿಯಲ್ಲಿ ಅಧಿಕಾರಿಗಳು ಆಡಿದ್ದೆ ಆಟ, ಮಾಡಿದ್ದೆ ನಿಯಮ ಎಂಬಂತಾಗಿದೆ ಎಂದು ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ ಎನ್ ಕೆ ಅರ್ಜುನ್ ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಚಿಂಚೋಳಿ ಹೆಚ್ ಗ್ರಾಮ ಪಂಚಾಯತಿಯಲ್ಲಿ ಅಧಿಕಾರಿಗಳು ಸರಿಯಾದ ಸಮಯಕ್ಕೆ ಕಚೇರಿಗೆ ಬರುವುದಿಲ್ಲ. ಗ್ರಾಮದ ಜನರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂಧನೆ ನೀಡುವುದಿಲ್ಲ.. ಈ ಕುರಿತು ಗ್ರಾಮಸ್ಥರು ಸಾಕಷ್ಟು ಬಾರಿ ಆಕ್ರೋಶ ಹೊರಹಾಕಿದ್ದಾರೆ. ಆದರು, ತೆಲೆಕೆಡಿಸಿಕೊಳ್ಳದ ಅಧಿಕಾರಿಗಳು ತಾವು ಮಾಡಿದ್ದೆ ನಿಯಮ ಎಂಬಂತೆ ವರ್ತಿಸುತ್ತಿದ್ದಾರೆ. ಇದರಿಂದ ಗ್ರಾಮಸ್ಥರು ಬೇಸತ್ತು ಹೋಗಿದ್ದಾರೆ. ಈ ಕುರಿತು ತಾಲೂಕು ಅಧಿಕಾರಿಗಳಿಗೆ ದೂರು ನೀಡಿದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.
ಕೂಡಲೆ ಮೇಲಾಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು. ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸುವಂತಹ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು ಇಲ್ಲವಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa