ಬೆಂಗಳೂರು, 12 ಮಾರ್ಚ್ (ಹಿ.ಸ.) :
ಆ್ಯಂಕರ್ : ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು ಎಂದರು.
ಅಧಿಕಾರಕ್ಕೆ ಬಂದಾಗ ಪಕ್ಷದ ಕಾರ್ಯಕರ್ತರಿಗೆ ಅಧಿಕಾರದಲ್ಲಿ ಅವಕಾಶ ನೀಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಮಹಾರಾಷ್ಟ್ರದಲ್ಲಿ ಎಲ್ಲಾ ಶಾಸಕರ ಕಚೇರಿಗಳಿಗೆ ಆರ್ ಎಸ್ಎಸ್ ಕಾರ್ಯಕರ್ತರನ್ನು ನೇಮಿಸಿಕೊಳ್ಳುತ್ತಿರುವದನ್ನು ಉಲ್ಲೇಖಿಸಿದರು.
ತಾಲ್ಲೂಕುಗಳಲ್ಲಿ ಶಾಸಕರ ಘನತೆಗೆ, ಅಧಿಕಾರಕ್ಕೆ ಯಾವುದೇ ಚ್ಯುತಿ ಬರುವುದಿಲ್ಲ. ಈ ಬಗ್ಗೆ ಎಲ್ಲಾ ಜಿಲ್ಲಾಡಳಿತಕ್ಕೂ ಸೂಚನೆ ನೀಡಲಾಗಿದೆ ಎಂದರು. ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ ಎಂದು ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa