ಕಲಬುರಗಿ, 12 ಮಾರ್ಚ್ (ಹಿ.ಸ.) :
ಆ್ಯಂಕರ್ : ಹೋಳಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ನಗರ ಹಾಗೂ ಜಿಲ್ಲೆಯಾದ್ಯಂತ ಇದೇ ಮಾರ್ಚ್ 13ರ ಬೆಳಗಿನ 6 ರಿಂದ ಮಾರ್ಚ್ 15 ರ ಸಂಜೆ 6 ಗಂಟೆಯವರೆಗೆ ಎಲ್ಲಾ ತರಹದ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಿ, ಬಾರ್ ಮತ್ತು ರೆಸ್ಟೋರೆಂಟ್‍ಗಳನ್ನು ಮುಚ್ಚುವಂತೆ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಬಿ. ಫೌಜಿಯಾ ತರನ್ನುಮ್ ಆದೇಶ ಹೊರಡಿಸಿದ್ದಾರೆ.
ಈ ಹೋಳಿ ಹಬ್ಬದ ಸಂದರ್ಭದಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಅನ್ವಯ ಈ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa