ಕಲಬುರಗಿ, 12 ಮಾರ್ಚ್ (ಹಿ.ಸ.) :
ಆ್ಯಂಕರ್ : ಡಾ.ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ ಘನಟೆ ಕಲಬುರಗಿಯಲ್ಲಿ ನಡೆದಿದೆ.
ಲೋಕಾಯುಕ್ತ ಪೋಲಿಸ್ ವರಿಷ್ಠಾಧಿಕಾರಿ ಉಮೇಶ್ ಬಿ.ಕೆ, ಡಿವೈಎಸ್ಪಿ ಗೀತಾ ಬೇನಾಳ ನೇತೃತ್ವದಲ್ಲಿ ಕಲಬುರಗಿ ನಗರದಲ್ಲಿರುವ ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ಅವ್ಯವಹಾರ, ಲಂಚ ಸ್ವೀಕಾರ ಬಗ್ಗೆ ಸಾರ್ವಜನಿಕರಿಂದ ಅನೇಕ ದೂರುಗಳು ಬಂದ ಹಿನ್ನಲೆ ಸರ್ಚ್ ವಾರೆಂಟ್ ಸಮೇತ ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೇಲೆ ಲೋಕಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಕಚೇರಿಯಲ್ಲಿ ಪ್ರತಿಯೊಂದು ದಾಖಲೆಗಳನ್ನ ಪರಿಶೀಲನೆ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa