ಕಲಬುರಗಿ, 12 ಮಾರ್ಚ್ (ಹಿ.ಸ.) :
ಆ್ಯಂಕರ್ : ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ರೇವನೂರ ಗ್ರಾಮದಲ್ಲಿ ಕಂಡುಬಂದಿರುವ ಚಿರತೆಯ ಬಂಧನಕ್ಕೆ ಅರಣ್ಯ ಇಲಾಖೆ ಕಾರ್ಯಾಚರಣೆಯಲ್ಲಿ ತೊಡಗಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಮಾತನಾಡಿ ಚಿರತೆ ಸೆರೆಗೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿರುವುದಾಗಿ ಶಾಸಕ ಅಜಯ್ ಸಿಂಗ್ ಹೇಳಿದ್ದಾರೆ,
ಚಿರತೆ ದಾಳಿಯಿಂದ ಗಾಯಗೊಂಡು ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಜೇವರ್ಗಿಯಲ್ಲಿ ಚಿಕಿತ್ಸೆಗೆ ಪಡೆಯುತ್ತಿರುವ ರೇವನೂರ ಗ್ರಾಮದ ನಿಂಗಪ್ಪ ಆಲೂರ ಅವರ ಆರೋಗ್ಯ ಸುಸ್ಥಿರವಾಗಿದೆ ಈ ಕುರಿತು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಾರ್ವಜನಿಕರು ಭಯ ಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa