ಕಲಬುರಗಿ, 12 ಮಾರ್ಚ್ (ಹಿ.ಸ.) :
ಆ್ಯಂಕರ್ : ಗರ್ಭಿಣಿ ಮಹಿಳೆಯ ಸಾವಿಗೆ ಕಾರಣವಾದ ವೈದ್ಯರ ವಿರುದ್ದ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಕಲಬುರಗಿ ನಗರದಲ್ಲಿ ಮಾದಿಗ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಮಾದಿಗ ಸಮಾಜದ ವತಿಯಿಂದ ನಗರದ ಡಾ. ಬಾಬು ಜಗಜೀವನ್ ರಾಮ್ ಪುತ್ಥಳಿ ಆವರಣದಿಂದ ಡಿಸಿ ಕಚೇರಿಯವರೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಮುಖಂಡರು ವೈದ್ಯ ಡಾ.ಚಂದ್ರೀಕಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಮುಖಂಡರು, ಖಾಸಗಿ ಸುರಕ್ಷಾ ಹೆರಿಗೆ ಆಸ್ಪತ್ರೆಯಲ್ಲಿ ಜ್ಯೋತಿ ಪರಶುರಾಮ ಹಸರಗುಂಡಗಿ ಅವರಿಗೆ ಸರಿಯಾದ ಚಿಕಿತ್ಸೆ ನೀಡದ ಹಿನ್ನೆಲೆಯಲ್ಲಿ ಅತಿಯಾದ ರಕ್ತಸ್ರಾವವಾಗಿ ಗರ್ಭಿಣಿ ಸಾವನಪ್ಪಿದ್ದಳು. ಹಾಗಾಗಿ ವೈದ್ಯ ಡಾ.ಚಂದ್ರಿಕಾ ರನ್ನ ಸೇವೆಯಿಂದ ಅಮಾನತ್ತು ಮಾಡಬೇಕು ಹಾಗೂ ಮೃತಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa