ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ವಿಜ್ಞಾನ ಪ್ರದರ್ಶನ ಮೇಳ
ಬಳ್ಳಾರಿ, 12 ಮಾರ್ಚ್ (ಹಿ.ಸ.): ಆ್ಯಂಕರ್ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಮಾ.14 ಮತ್ತು 15 ರಂದು ವಿಜ್ಞಾನ ಪ್ರದರ್ಶನ ಮೇಳ ಮತ್ತು ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ ಎಂದು ವಿವಿಯ ಕುಲಪತಿಗಳಾದ ಪ್ರೊ.ಎಂ ಮುನಿರಾಜು ಅವರು ತಿಳಿಸಿದ್ದಾರೆ. ವಿಶ್ವವಿದ್ಯಾಲಯದ ಅಧೀನದ ಎಲ್ಲ ಕಾಲೇಜುಗಳ
ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ವಿಜ್ಞಾನ ಪ್ರದರ್ಶನ ಮೇಳ


ಬಳ್ಳಾರಿ, 12 ಮಾರ್ಚ್ (ಹಿ.ಸ.):

ಆ್ಯಂಕರ್ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಮಾ.14 ಮತ್ತು 15 ರಂದು ವಿಜ್ಞಾನ ಪ್ರದರ್ಶನ ಮೇಳ ಮತ್ತು ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ ಎಂದು ವಿವಿಯ ಕುಲಪತಿಗಳಾದ ಪ್ರೊ.ಎಂ ಮುನಿರಾಜು ಅವರು ತಿಳಿಸಿದ್ದಾರೆ.

ವಿಶ್ವವಿದ್ಯಾಲಯದ ಅಧೀನದ ಎಲ್ಲ ಕಾಲೇಜುಗಳು, ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಶಾಲಾ ಮಕ್ಕಳು, ಸಾರ್ವಜನಿಕರು ಮುಕ್ತವಾಗಿ ಭಾಗವಹಿಸಬಹುದು. ಯುವ ವಿಜ್ಞಾನಿಗಳನ್ನು ಪ್ರೋತ್ಸಾಹಿಸಲು ಈ ಮೇಳವನ್ನು ಆಯೋಜಿಸಲಾಗಿದೆ ಎಂದರು.

ಸೌತ್ ಅಮೇರಿಕದ ಚಿಲಿಯ ತರಪಾಕ ವಿಶ್ವವಿದ್ಯಾಲಯದ ನಿರ್ದೇಶಕರಾದ ಪ್ರೊ.ಡೇವಿಡ್ ಲಾರೋಝ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಇದೇ ಸಂದರ್ಭದಲ್ಲಿ ತರಪಾಕ ವಿಶ್ವವಿದ್ಯಾಲಯದೊಂದಿಗೆ ಶೈಕ್ಷಣಿಕ ಒಡಂಬಡಿಕೆಯ ಒಪ್ಪಂದವನ್ನು ವಿನಿಮಯ ಮಾಡಲಾಗುವುದು ಎಂದು ಕುಲಸಚಿವರಾದ ರುದ್ರೇಶ್ ಅವರು ಎಸ್.ಎನ್ ತಿಳಿಸಿದ್ದಾರೆ.

ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಇದೇ ಮೊದಲ ಬಾರಿಗೆ ವಿಜ್ಞಾನ ಮೇಳವನ್ನು ವಿವಿಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಭಾಗದ ವಿದ್ಯಾರ್ಥಿಗಳು, ವಿಜ್ಞಾನ ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬೇಕು.

ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವರಾದ ಪ್ರೊ.ಎನ್.ಎಂ ಸಾಲಿ, ವಿತ್ತಾಧಿಕಾರಿ ನಾಗರಾಜ, ಕಾರ್ಯಕ್ರಮದ ಸಂಯೋಜಕ ಪ್ರೊ.ಕೆ.ಎಸ್ ಲೋಕೇಶ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande