ಕಲಬುರಗಿ, 12 ಮಾರ್ಚ್ (ಹಿ.ಸ.) :
ಆ್ಯಂಕರ್ : ಬೇಸಿಗೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಬುಧವಾರ ಕಲಬುರಗಿ ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಪೂರೈಕೆ ಸ್ಥಿತಿಗತಿ ಕುರಿತು ಅವಲೋಕಿಸಿದರು.
ತಾಲೂಕಿನ ಭೀಮಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಜಾಫರಾಬಾದ ಗ್ರಾಮಕ್ಕೆ ತೆರಳಿದ ಅವರು, ಗ್ರಾಮದಲ್ಲಿನ ಆಶ್ರಯ ಕಾಲೋನಿ, ಪಂಡಿತ್ ದೀನ ದಯಾಳ ನಗರ, ಎಸ್.ಎಂ.ಕೃಷ್ಣ ಕಾಲೋನಿಗಳ ಮನೆ-ಮನೆಗಳಿಗೆ ಭೇಟಿ ನೀಡಿ ನೀರು ಪೂರೈಕೆ ಕುರಿತು ಸಾರ್ವಜನಿಕರಿಂದ ವಿಚಾರಿಸಿದರು. ನೀರು ಪೂರೈಕೆಯಲ್ಲಿ ವ್ಯತ್ಯವಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದರಿಂದ ಪ್ರತಿ ವಾರ ನೀರು ಪೂರೈಕೆ ಮಾಡಬೇಕೆಂದು ಎಲ್. & ಟಿ ಅಧಿಕಾರಿಗಳಿಗೆ ಸೂಚಿಸಿದಲ್ಲದೆ ನೀರು ಮಿತವಾಗಿ ಬಳಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa