ಜಿಲ್ಲಾ ಬಿಜೆಪಿಯಿಂದ ಡಿಸಿ ಎಂ.ಆರ್ ರವಿಗೆ ಸನ್ಮಾನ
ಜಿಲ್ಲಾ ಬಿಜೆಪಿಯಿಂದ ಡಿಸಿ ಎಂ.ಆರ್ ರವಿಗೆ ಸನ್ಮಾನ
ಕೋಲಾರ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ ಹಾಗೂ ಇತರರು ಜಿಲ್ಲಾಧಿಕಾರಿ ಎಂ.ಆರ್. ರವಿರವರನ್ನು ಭೇಟಿ ಮಾಡಿ ಸನ್ಮಾನಿಸಿದರು.


ಕೋಲಾರ, ೧೩ ಮಾರ್ಚ್ (ಹಿ.ಸ) :

ಆ್ಯಂಕರ್ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ವಿನಾಕಾರಣ ಕಿರುಕುಳ ಕೊಡುತ್ತಿದ್ದಾರೆ. ಜೊತೆಗೆ ಕಾರ್ಯಕರ್ತರು ಹಾಗೂ ಮುಖಂಡರ ಕೆಲಸಗಳನ್ನು ಮಾಡುವುದಿಲ್ಲ. ಪ್ರತಿ ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಅವರನ್ನು ಸನ್ಮಾನಿಸಿ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ಓಂಶಕ್ತಿ ಚಲಪತಿ ಚುನಾವಣೆ ಸಂದರ್ಭದಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಪ್ರತಿಯೊಂದು ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದೆ ನಗರಸಭೆಯಲ್ಲಿ ಇ ಖಾತೆ ಮಾಡಿಕೊಳ್ಳಲು ಲಂಚ ಕೊಡಬೇಕಾಗಿದೆ ಕಾಂಗ್ರೆಸ್ ಕಾರ್ಯಕರ್ತರ ಕೆಲಸಗಳಿಗೆ ಕೊಟ್ಟ ಅಧ್ಯತೆ ಬಿಜೆಪಿ ಕಾರ್ಯಕರ್ತರಿಗೆ ಕೊಡಲ್ಲ ವಿನಾಕಾರಣ ಕೇಸ್ ಹಾಕಿ ಜೈಲಿಗೆ ಕಳುಹಿಸಲಾಗಿದೆ ಇದು ಯಾವ ನ್ಯಾಯ ಎಂದು ಮನವರಿಕೆ ಮಾಡಿದರು.

ಹೆಣ್ಣು ಮಕ್ಕಳಿಗೆ ಭಾಗ್ಯಲಕ್ಷ್ಮೀ ಬಾಂಡ್ ಪಡೆಯಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗೆ ಕನಿಷ್ಠ ಎರಡು ಸಾವಿರ ಕೊಡಬೇಕಾಗಿದೆ ಪ್ರತಿ ಇಲಾಖೆಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ವಿವಿಧ ತನಿಖಾ ತಂಡಗಳಿAದ ಅಧಿಕಾರಿಗಳ ಮೇಲೆ ದಾಳಿಗಳು ನಡೆದು ಭ್ರಷ್ಟಾಚಾರ ಮತ್ತು ಅವ್ಯವಹಾರ ಸಾಬೀತಾಗಿದೆ ಕೂಡಲೇ ಇದರ ವಿರುದ್ದ ಕ್ರಮ ಕೈಗೊಳ್ಳಬೇಕು ಇಲ್ಲದೇ ಹೋದರೆ ಮುಂದೆ ಪಕ್ಷದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಮನವರಿಕೆ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷ ಸಾ.ಮಾ ಬಾಬು, ಯುವ ಮೋರ್ಚಾ ಮಾಜಿ ಜಿಲ್ಲಾ ಅಧ್ಯಕ್ಷ ಬಿ.ಎನ್ ಶಿವಕುಮಾರ್, ಬೆಂಗಳೂರು ವಿವಿ ಸೆನೆಟ್ ಸದಸ್ಯ ರವೀಶ್ ಗೌಡ, ಬಿಜೆಪಿ ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಚಲುವನಹಳ್ಳಿ ಶ್ರೀನಿವಾಸ್, ಎಸ್ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಳಹಸ್ತಿಪುರ ಅಂಬರೀಶ್ ಹಾಜರಿದ್ದರು.

ಚಿತ್ರ : ಕೋಲಾರ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ ಹಾಗೂ ಇತರರು ಜಿಲ್ಲಾಧಿಕಾರಿ ಎಂ.ಆರ್. ರವಿರವರನ್ನು ಭೇಟಿ ಮಾಡಿ ಸನ್ಮಾನಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande