ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ
ಕಲಬುರಗಿ, 13 ಮಾರ್ಚ್ (ಹಿ.ಸ.) : ಆ್ಯಂಕರ್ : ಬೈಕ್ ಅಡ್ಡಗಟ್ಟಿ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿ ನಗರದ ಖಾದ್ರಿ ಚೌಕ್ ಬಳಿ ನಡೆದಿದೆ. ಖಾದ್ರಿ ಚೌಕ್ ಬಳಿಯ ನಬಿ ಕಾಲೋನಿ ನಿವಾಸಿ ಇಮ್ರಾನ್ ಸೈಯದ್ (28) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
Murder


ಕಲಬುರಗಿ, 13 ಮಾರ್ಚ್ (ಹಿ.ಸ.) :

ಆ್ಯಂಕರ್ : ಬೈಕ್ ಅಡ್ಡಗಟ್ಟಿ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿ ನಗರದ ಖಾದ್ರಿ ಚೌಕ್ ಬಳಿ ನಡೆದಿದೆ.

ಖಾದ್ರಿ ಚೌಕ್ ಬಳಿಯ ನಬಿ ಕಾಲೋನಿ ನಿವಾಸಿ ಇಮ್ರಾನ್ ಸೈಯದ್ (28) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಬುಧವಾರ ತಡ ರಾತ್ರಿ ಬೈಕ್ ಮೇಲೆ ತೆರಳುವಾಗ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆಂದು ತಿಳಿದು ಬಂದಿದೆ.

ಕೊಲೆಯಾದ ವ್ಯಕ್ತಿ ಮೇಲೆ ನಗರದ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಿವೆ ಎನ್ನಲಾಗುತ್ತಿದೆ. ಇನ್ನು ಘಟನಾ ಸ್ಥಳಕ್ಕೆ ಡಿಸಿಪಿ ಕನಿಕಾ ಸಿಕ್ರಿವಾಲ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದು ಹಂತಕರ ಬಂಧನಕ್ಕೆ ಪೋಲಿಸರು ಜಾಲ ಬಿಸಿದ್ದಾರೆ.

ಈ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande