ಹೊಸಪೇಟೆ, 13 ಮಾರ್ಚ್ (ಹಿ.ಸ.):
ಆ್ಯಂಕರ್ : ಹೊಸಪೇಟೆ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆ.ಸುರೇಶ (37 ) ಕಾಣೆಯಾಗಿರುವ ಕುರಿತು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಅವರು ತಿಳಿಸಿದ್ದಾರೆ.
ವ್ಯಕ್ತಿ ಚಹರೆ: ಕೋಲು ಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, 6 ಅಡಿ ಎತ್ತರ ಇದ್ದು, ನೀಲಿ ಬಣ್ಣದ ಟೀ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಇಂಗ್ಲೀಷ್ ಮತ್ತು ಹಿಂದಿ ಭಾಷೆಯನ್ನು ಮಾತನಾಡುತ್ತಾನೆ. 10 ವರ್ಷದಿಂದ ಮಾನಸಿಕ ಖಾಯಿಲೆ ಇದ್ದು, ಕೆಲ ಆಸ್ಪತ್ರೆಗಳಲ್ಲಿ ತೋರಿಸಿದರು ಗುಣಮುಖನಾಗಿರುವುದಿಲ್ಲ. ಎರಡು ವರ್ಷಗಳ ಹಿಂದೆ ತಮಿಳುನಾಡಿನ ಪುಣ್ಯೇಶ್ವರ ದೇವಸ್ಥಾನಕ್ಕೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೋದವನು ಮನೆಗೆ ವಾಪಾಸು ಬಂದಿರುವುದಿಲ್ಲ.
ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಪಟ್ಟಣ ಪೊಲೀಸ್ ಠಾಣೆಯ ಪಿ.ಐ ಅವರ ದೂ.ಸಂ:08394-224033, ಮೊ.ಸಂ:9480805745, ಡಿ.ಎಸ್.ಪಿ ಅವರ ದೂ.ಸಂ:08394-224204, ಎಸ್.ಪಿ ಅವರ ದೂ.ಸಂ:08394-224082ಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್