ಚಂಡೀಗಢ, 14 ಮಾರ್ಚ್ (ಹಿ.ಸ.) :
ಆ್ಯಂಕರ್ : ಪಂಜಾಬ್-ಚಂಡೀಗಢ ಗಡಿಯಲ್ಲಿ ಹೋಳಿ ಹಬ್ಬದ ಸಂದರ್ಭದಲ್ಲಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಪೊಲೀಸರ ಸಹಿತ ಮೂವರು ಸಾವನ್ನಪ್ಪಿದ್ದಾರೆ. ಶುಕ್ರವಾರ ಬೆಳಿಗ್ಗೆ, ತಪಾಸಣಾ ಕೇಂದ್ರದಲ್ಲಿ ಪೊಲೀಸ್ ಸಿಬ್ಬಂದಿ ಸುಖದರ್ಶನ್ ಮತ್ತು ರಾಜೇಶ್, ವಾಹನ ತಪಾಸಣೆ ನಡೆಸುತ್ತಿದ್ದಾಗ, ಅತಿ ವೇಗವಾಗಿ ಆಗಮಿಸಿದ ಕಾರು ಡಿಕ್ಕಿಯಿಂದಾಗಿ ಮೂವರು ಸಾವನಪ್ಪಿದ್ದಾರೆ.
ಕಾರು ಚಾಲಕ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ಎಂದು ವೈದ್ಯಕೀಯ ಪರೀಕ್ಷೆಯಲ್ಲಿ ಸಾಬೀತಾಗಿದೆ. ಅಪಘಾತ ಹಿನ್ನೆಲೆಯಲ್ಲಿ ಚಂಡೀಗಢ ಎಸ್‌ಎಸ್‌ಪಿ ಕನ್ವರ್‌ದೀಪ್ ಕೌರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa