ಪಾಕಿಸ್ತಾನಕ್ಕೆ ಭಾರತದ ತಿರುಗೇಟು
ನವದೆಹಲಿ, 14 ಮಾರ್ಚ್ (ಹಿ.ಸ.) : ಆ್ಯಂಕರ್ : ತನ್ನ ದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದಕ ಚಟುವಟಿಕೆಗಳಿಗೆ ಭಾರತವನ್ನು ದೂಷಿಸುವ ಪಾಕಿಸ್ತಾನದ ಮನೋಭಾವವನ್ನು ಭಾರತೀಯ ವಿದೇಶಾಂಗ ಸಚಿವಾಲಯ ಟೀಕಿಸಿದೆ. ತನ್ನ ಆಂತರಿಕ ಸಮಸ್ಯೆಗಳು ಮತ್ತು ವೈಫಲ್ಯಗಳಿಗಾಗಿ ಇತರರ ಮೇಲೆ ಬೆರಳು ತೋರಿಸುವ ಬದಲು, ನೆರೆಯ ದೇಶವು
External affairs


ನವದೆಹಲಿ, 14 ಮಾರ್ಚ್ (ಹಿ.ಸ.) :

ಆ್ಯಂಕರ್ : ತನ್ನ ದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದಕ ಚಟುವಟಿಕೆಗಳಿಗೆ ಭಾರತವನ್ನು ದೂಷಿಸುವ ಪಾಕಿಸ್ತಾನದ ಮನೋಭಾವವನ್ನು ಭಾರತೀಯ ವಿದೇಶಾಂಗ ಸಚಿವಾಲಯ ಟೀಕಿಸಿದೆ. ತನ್ನ ಆಂತರಿಕ ಸಮಸ್ಯೆಗಳು ಮತ್ತು ವೈಫಲ್ಯಗಳಿಗಾಗಿ ಇತರರ ಮೇಲೆ ಬೆರಳು ತೋರಿಸುವ ಬದಲು, ನೆರೆಯ ದೇಶವು ತನ್ನೊಳಗೆ ನಡೆಯುತ್ತಿರುವ ಚಟುವಟಿಕೆಗಳನ್ನು ನೋಡಿಕೊಳ್ಳಬೇಕು ಎಂದು ಭಾರತ ತಿರುಗೇಟು ನೀಡಿದೆ.

ಪಾಕಿಸ್ತಾನ ಮಾಡಿರುವ ಆಧಾರರಹಿತ ಆರೋಪಗಳನ್ನು ನಾವು ಬಲವಾಗಿ ತಿರಸ್ಕರಿಸುತ್ತೇವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಾಗತಿಕ ಭಯೋತ್ಪಾದನೆಯ ಕೇಂದ್ರ ಎಲ್ಲಿದೆ ಎಂಬುದು ಇಡೀ ಜಗತ್ತಿಗೆ ತಿಳಿದಿದೆ. ಪಾಕಿಸ್ತಾನವು ತನ್ನ ಆಂತರಿಕ ಸಮಸ್ಯೆಗಳು ಮತ್ತು ವೈಫಲ್ಯಗಳಿಗೆ ಇತರರನ್ನು ದೂಷಿಸುವ ಬದಲು ತನ್ನೊಳಗೆ ನೋಡಿಕೊಳ್ಳಬೇಕು. ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ವಕ್ತಾರ ಶಫ್ಕತ್ ಅಲಿ ಖಾನ್ ಇತ್ತೀಚೆಗೆ ಅಲ್ಲಿನ ರೈಲು ಅಪಹರಣ ಘಟನೆಯಲ್ಲಿ ಭಾರತದ ಕೈವಾಡ ಇರುವ ಕುರಿತು ನೀಡಿರುವ ಹೇಳಿಕೆಗೆ ವಿದೇಶಾಂಗ ಸಚಿವಾಲಯ ಉತ್ತರ ನೀಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande