ವಿಜಯಪುರ, 26 ಮಾರ್ಚ್ (ಹಿ.ಸ.) :
ಆಂಕರ್ : ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುತ್ತಿದ್ದಂತೆ ಶಾಸಕ ಬಸನಗೌಡ ಪಾಟೀಲ್
ಯತ್ನಾಳ್, ನ ದೈನ್ಯಂ, ನ ಪಲಾಯನಂ, ಸತ್ಯಮೇವ ಜಯತೆ ಎಂದು ಎಕ್ಸ್ನಲ್ಲಿ ಟ್ವೀಟ್ ಮಾಡಿದ್ದಾರೆ.
ಸತ್ಯವಂತರಿಗಿದು ಕಾಲವಲ್ಲ
ದುಷ್ಟ ಜನರಿಗೆ ಸುಭಿಕ್ಷಕಾಲ
ಉಪಕಾರ ಮಾಡಿದರೆ ಅಪಕರಿಸುವ ಕಾಲ
ಸಕಲವು ತಿಳಿದವಗೆ ದುರ್ಭಿಕ್ಷ ಕಾಲ.
ಧರ್ಮ ಮಾಡುವವರಿಗೆ ನಿರ್ಮೂಲವಾಗುವ ಕಾಲ
ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ
ಸತ್ಯವಂತರಿಗಿದು ಕಾಲವಲ್ಲ ಎಂದು ಪೋಸ್ಟ್ ಹಾಕಿದ್ದಾರೆ. ಇನ್ನು, ಪ್ರತಿನಿತ್ಯ ಜನ ಜಂಗುಳಿಯಿಂದ ತುಂಬಿರುತ್ತಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಕಚೇರಿ ಖಾಲಿ ಖಾಲಿಯಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande