ನವದೆಹಲಿ, 27 ಮಾರ್ಚ್ (ಹಿ.ಸ.) :
ಆ್ಯಂಕರ್ : ಇಂದಿನ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಾಗಿದೆ. ಮಾರುಕಟ್ಟೆಯಲ್ಲಿ ಸತತ ಮೂರು ದಿನಗಳ ಕುಸಿತದ ಬಳಿಕ ಇಂದು ಚಿನ್ನದ ಬೆಲೆ ಏರಿಕೆಯಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ ₹89,410 ರಿಂದ ₹89,560 ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ₹81,960 ರಿಂದ ₹82,110 ಏರಿಕೆಯಾಗಿದೆ.
ಬೆಳ್ಳಿ ಕಿಲೋಗ್ರಾಂಗೆ ₹1,02,100 ಗೆ ತಲುಪಿದೆ.
ಪ್ರಮುಖ ನಗರಗಳಾದ ದೆಹಲಿ, ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು ಮತ್ತು ಹೈದರಾಬಾದ್ ಸೇರಿದಂತೆ ಇತರ ನಗರಗಳಲ್ಲೂ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa