ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಲು ಶಾಸಕ ಕೊತ್ತೂರು ಮಂಜುನಾಥ್ ಸಲಹೆ
ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಲು ಶಾಸಕ ಕೊತ್ತೂರು ಮಂಜುನಾಥ್ ಸಲಹೆ
ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಿಂದ ತರಬೇತಿ ಪಡೆದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ವಿತರಿಸಿದರು.


ಕೋಲಾರ, ೨೯ ಮಾರ್ಚ್ (ಹಿ.ಸ) ಆಂಕರ್ : ಸರ್ಕಾರದಿಂದ ದೊರೆಯುವ ಸೌಕರ್ಯಗಳನ್ನು ಉಪಯೋಗಿಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ತೆಗೆದುಕೊಂಡ ಸಾಮಾಗ್ರಿಗಳನ್ನು ಬೇರೆಯವರಿಗೆ ಮಾರಾಟ ಮಾಡಬಾರದು ಎಂದು ಶಾಸಕ ಕೊತ್ತೂರು ಮಂಜುನಾಥ್ ಪಲಾನುಭವಿಗಳಿಗೆ ತಿಳಿಸಿದರು.

ನಗರದ ತಮ್ಮ ಕಛೇರಿ ಮುಂದೆ ಶನಿವಾರ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ನಿರುದ್ಯೋಗ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಮತ್ತು ಪುರುಷರಿಗೆ ಸುಧಾರಿತ ಉಪಕರಣಗಳ ವಿತರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಜನಕ್ಕೆ ಮಾಹಿತಿ ಕೊಟ್ಟು ಸೌಲಭ್ಯ ಕೊಟ್ಟರು ಅದು ಎಲ್ಲೋ ಒಂದು ಕಡೆ ದುರುಪಯೋಗವಾಗುತ್ತಿದೆ ಅಧಿಕಾರಿಗಳು ಸಹ ಪಲಾನುಭವಿಗಳ ಬಗ್ಗೆ ನಿಗಾ ವಹಿಸಬೇಕು ಜೊತೆಗೆ ಸರ್ಕಾರದಿಂದ ದೊರೆಯಬಹುದಾದ ಹಲವಾರು ಸವಲತ್ತುಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಉಪ ನಿರ್ದೇಶಕ ರವಿಚಂದ್ರರೆಡ್ಡಿ ಮಾತನಾಡಿ ಪ್ರತಿ ತಾಲೂಕಿನಲ್ಲಿ ನಿರುದ್ಯೋಗ ಮಹಿಳೆಯರು ಮತ್ತು ಪುರುಷರಿಗೆ ಮಾಹಿತಿ ನೀಡಿ ಅವರಿಂದ ಅರ್ಜಿಗಳನ್ನು ಸ್ವೀಕರಿಸಿ ನೇರವಾಗಿ ಪಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ ಪ್ರತಿ ತಾಲೂಕಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು

ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ನರಸಾಪುರ ಸೊಸೈಟಿ ಅಧ್ಯಕ್ಷ ಖಾಜಿಕಲ್ಲಹಳ್ಳಿ ಮುನಿರಾಜು, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಛತ್ರಕೋಡಿಹಳ್ಳಿ ಮಂಜುನಾಥ್, ನದೀಂ, ಚಿನ್ನಾಪುರ ನಾರಾಯಣಸ್ವಾಮಿ, ಜಾಲಿ ಬಾನು, ಮುಂತಾದವರು ಇದ್ದರು.

ಚಿತ್ರ : ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಿಂದ ತರಬೇತಿ ಪಡೆದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ವಿತರಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande