ಕಠ್ಮಂಡು, 29 ಮಾರ್ಚ್ (ಹಿ.ಸ.) :
ಆ್ಯಂಕರ್ : ನೇಪಾಳದಲ್ಲಿ ರಾಜಪ್ರಭುತ್ವ ಬೆಂಬಲಿಸಿ ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮಾಜಿ ರಾಜ ಜ್ಞಾನೇಂದ್ರ ಶಾ ಅವರನ್ನು ಗೃಹಬಂಧನಕ್ಕೆ ಒಳಪಡಿಸಲಾಗಿದೆ. ಪ್ರತಿಭಟನೆಯಲ್ಲಿ ಭಾಗಿಯಾದ ರಾಷ್ಟ್ರೀಯ ಪ್ರಜಾತಂತ್ರ ಪಕ್ಷದ ಹಿರಿಯ ನಾಯಕರನ್ನು ಸಹ ಬಂಧಿಸಲಾಗಿದೆ.
ಹಿಂಸಾತ್ಮಕ ಘಟನೆಯಿಂದ ಬೆಂಕಿ ಹಚ್ಚುವಿಕೆ, ಲೂಟಿ ಮತ್ತು ಪತ್ರಕರ್ತನನ್ನು ಜೀವಂತವಾಗಿ ಸುಟ್ಟು ಹಾಕಿದ ಹಲವಾರು ಘಟನೆಗಳ ಹಿನ್ನಲೆಯಲ್ಲಿ, ಪ್ರಧಾನಿ ಕೆ.ಪಿ.ಶರ್ಮಾ ಓಲಿ ಅವರ ಅಧ್ಯಕ್ಷತೆಯಲ್ಲಿ ತುರ್ತು ಸಂಪುಟ ಸಭೆ ನಡೆಯಿತು.
ಹಿರಿಯ ಪೊಲೀಸ್ ಮತ್ತು ಸೇನಾ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ.
ಪ್ರಮುಖ ನಾಯಕ ದುರ್ಗಾ ಪ್ರಸಾಯಿ ಅವರನ್ನು ಬಂಧಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಅವರು ಮತ್ತು ಅವರ ತಂಡ ಪೊಲೀಸರ ಬ್ಯಾರಿಕೇಡ್ ದಾಟಿ ಪರಾರಿಯಾದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ನೇಪಾಳ ಸರ್ಕಾರ ಶಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa