ಬೆಂಗಳೂರು, 29 ಮಾರ್ಚ್ (ಹಿ.ಸ.) :
ಆ್ಯಂಕರ್ : ಬಿಜೆಪಿ ಪಕ್ಷದಿಂದ ಉಚ್ಚಾಟನೆಗೊಂಡಿರುವ
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೇ ಪಕ್ಷಕ್ಕೆ ಮರಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಶನಿಮಹಾತ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ತಾನ್ಯಾವತ್ತೂ ಬಿಜೆಪಿಯನ್ನು ತೊರೆಯುವುದಿಲ್ಲ. ರಾಜ್ಯದಾದ್ಯಂತ ಸುತ್ತಿ ಬಿಜೆಪಿಯನ್ನು ರಿಪೇರಿ ಮಾಡುತ್ತೇನೆ. ಸನಾತನ ಹಿಂದೂ ಧರ್ಮದಿಂದ ಹಳಿ ತಪ್ಪಿರುವ ಪಕ್ಷವನ್ನು ಪುನಃ ಹಳಿ ಮೇಲೆ ತರುವ ಕೆಲಸ ಮಾಡುತ್ತೇನೆಯೇ ಹೊರತು ಯಾವತ್ತೂ ಹೊಸ ಪಕ್ಷ ಕಟ್ಟುವ ಕೆಲಸಕ್ಕೆ ಕೈ ಹಾಕಲ್ಲ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa