ಕಥುವಾ : ಮುಂದುವರೆದ ಭದ್ರತಾ ಪಡೆ ಶೋಧ
ಜಮ್ಮು, 29 ಮಾರ್ಚ್ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರ ವಿರುದ್ಧ ಶೋಧ ಕಾರ್ಯಾಚರಣೆ ಮುಂದುವರೆಸಿವೆ. ಈ ಕಾರ್ಯಾಚರಣೆಯಲ್ಲಿ ಇದುವರೆಗೂ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಹತರಾಗಿದ್ದು, ನಾಲ್ವರು ಪೊಲೀಸ್ ಸಿಬ್ಬಂದಿ ಹುತ
Search


ಜಮ್ಮು, 29 ಮಾರ್ಚ್ (ಹಿ.ಸ.) :

ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರ ವಿರುದ್ಧ ಶೋಧ ಕಾರ್ಯಾಚರಣೆ ಮುಂದುವರೆಸಿವೆ. ಈ ಕಾರ್ಯಾಚರಣೆಯಲ್ಲಿ ಇದುವರೆಗೂ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಹತರಾಗಿದ್ದು, ನಾಲ್ವರು ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

ಹೆಡ್ ಕಾನ್ಸ್‌ಟೇಬಲ್ ಜಗ್ಬೀರ್ ಸಿಂಗ್ ಸೇರಿದಂತೆ ಹುತಾತ್ಮರಾದ ಪೊಲೀಸರಿಗೆ ಗೌರವ ಸಲ್ಲಿಸಲಾಗಿದ್ದು, ಅವರ ಮೃತದೇಹಗಳನ್ನು ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ನಿಷೇಧಿತ ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದ ಉಗ್ರರನ್ನು ಪತ್ತೆ ಹಚ್ಚಲು ಬಿಲಾವರ್ ಹೈಟ್ಸ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.

ಈ ಪ್ರದೇಶದಲ್ಲಿ ಮತ್ತೆ ಗುಂಡಿನ ಚಕಮಕಿ ನಡೆದಿರುವುದಾಗಿ ತಿಳಿದು ಬಂದಿದೆ, ಆದರೆ ಭದ್ರತಾ ಪಡೆಗಳು ಸ್ಫೋಟಕಗಳನ್ನು ನಾಶಪಡಿಸುತ್ತಿರುವುದರಿಂದ ಸ್ಫೋಟಗಳ ಶಬ್ದಗಳು ಕೇಳಿಬರುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande