ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಕೊಪ್ಪಳ, 29 ಮಾರ್ಚ್ (ಹಿ.ಸ.) : ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕøತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರ ಕೊಪ್ಪಳ ಜಿಲ್ಲೆಯ ಪ್ರವಾಸ ಕಾರ್ಯಕ್ರಮವು ಮಾರ್ಚ್ 30 ಮತ್ತು 31 ವರೆಗೆ ಮುಂದುವರೆದಿದೆ. ಸಚಿವರು ಮಾ. 30 ರಂದು ಸ್ಥಳೀಯ ಕಾರ
ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ


ಕೊಪ್ಪಳ, 29 ಮಾರ್ಚ್ (ಹಿ.ಸ.) :

ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕøತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರ ಕೊಪ್ಪಳ ಜಿಲ್ಲೆಯ ಪ್ರವಾಸ ಕಾರ್ಯಕ್ರಮವು ಮಾರ್ಚ್ 30 ಮತ್ತು 31 ವರೆಗೆ ಮುಂದುವರೆದಿದೆ.

ಸಚಿವರು ಮಾ. 30 ರಂದು ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಹಾಗೂ ಕನಕಗಿರಿ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ಮಾಡುವರು. ನಂತರ ಅಂದು ಕಾರಟಗಿಯಲ್ಲಿ ವಾಸ್ತವ್ಯ ಮಾಡುವರು.

ಮಾ. 31 ರಂದು ಬೆಳಿಗ್ಗೆ 10 ಗಂಟೆಗೆ ರಮ್ಜಾನ್ ಹಬ್ಬದ ಪ್ರಯುಕ್ತ ಸಮಾಜ ಭಾಂದವರೊಂದಿಗೆ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವುದು. ನಂತರ ಬೆಳಿಗ್ಗೆ 11 ಗಂಟೆಗೆ ಯುಗಾದಿ ಹಬ್ಬದ ಪ್ರಯುಕ್ತ ಯುಗಾದಿ ವೈಭವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಬಳಿಕ ಅಂದು ಕಾರಟಗಿಯಲ್ಲಿ ವಾಸ್ತವ್ಯ ಮಾಡುವರು. ಮುಂದಿನ ಕಾರ್ಯಕ್ರಮಗಳನ್ನು ನಂತರ ತಿಳಿಸಲಾಗುವುದು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande