ನಕ್ಸಲ್ ಐಇಡಿ ಸ್ಫೋಟ : ಮಹಿಳೆಗೆ ಗಂಭೀರ ಗಾಯ
ಬಿಜಾಪುರ, 29 ಮಾರ್ಚ್ (ಹಿ.ಸ.) : ಆ್ಯಂಕರ್ : ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಇರಿಸಿದ್ದ ಒತ್ತಡದ ಐಇಡಿ ಸ್ಫೋಟ ಸಂಭವಿಸಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಭೈರಾಮ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಬೋಡ್ಗಾ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ 6:30 ರ ಸುಮಾರಿಗೆ ನಡೆದಿ
Ied


ಬಿಜಾಪುರ, 29 ಮಾರ್ಚ್ (ಹಿ.ಸ.) :

ಆ್ಯಂಕರ್ : ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಇರಿಸಿದ್ದ ಒತ್ತಡದ ಐಇಡಿ ಸ್ಫೋಟ ಸಂಭವಿಸಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಘಟನೆ ಭೈರಾಮ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಬೋಡ್ಗಾ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ 6:30 ರ ಸುಮಾರಿಗೆ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಸರಸ್ವತಿ ಓಯಂ ಎಂದು ಗುರುತಿಸಲಾಗಿದೆ.

ಮಹಿಳೆ ಕಾಡಿನಿಂದ ಮಹುವಾ ಸಂಗ್ರಹಿಸಿ ಹಿಂದಿರುಗುತ್ತಿದ್ದಾಗ, ನಕ್ಸಲರು ಇರಿಸಿದ್ದ ಐಇಡಿ ಸ್ಫೋಟಗೊಂಡಿದ್ದು, ಅವರ ಎರಡೂ ಕಾಲುಗಳು ಮತ್ತು ಕೈಗಳಿಗೆ ತೀವ್ರ ಗಾಯಗಳಾಗಿವೆ.

ಸ್ಥಳೀಯರು ತಕ್ಷಣವೇ ಅವರನ್ನು ಭೈರಾಮ್‌ಗಢದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಜಗದಲ್ಪುರ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ.

ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು, ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande