ಮಾನ್ವಿ,, 29 ಮಾರ್ಚ್ (ಹಿ.ಸ.) :
ಆ್ಯಂಕರ್ : ಮುಸ್ಲೀಂ ಧರ್ಮದ ಪವಿತ್ರ ರಂಜಾನ್ ಹಬ್ಬದ ನಿಮಿತ್ಯ ಮಾನ್ವಿಯ ಮಸೀದಿಗಳಿಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ಎಸ್ ಬೋಸರಾಜು ಹಾಗೂ ಮಾನ್ವಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹಂಪಯ್ಯ ನಾಯಕ ಅವರು ಭೇಟಿ ನೀಡಿ ಹಣ್ಣು-ಹಂಪಲು ವಿತರಣೆ ಮಾಡುವ ಮೂಲಕ ರಂಜಾನ್ ಹಬ್ಬದ ಶುಭ ಕೋರಿದರು.
ಮಾನ್ವಿ ಪಟ್ಟಣದಲ್ಲಿರುವ ಎಲ್ಲಾ ಮುಸ್ಲಿಂ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿ ಪರಸ್ಪರ ಹಬ್ಬದ ಶುಭ ಕೋರಿದರು.
ಕಾಂಗ್ರೆಸ್ ಮುಖಂಡರಾದ ಕೆ ಶಾಂತಪ್ಪ, ಶರಣಯ್ಯ ನಾಯಕ, ಮಾನ್ವಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಗಫೂರ್ ಸಾಬ್, ರುದ್ರಪ್ಪ ಅಂಗಡಿ, ಖಾಲೀದ್ ಗುರು, ಬಿಕೆ ಅಮರೇಶಪ್ಪ, ಸುಭಾಸ ನಾಯಕ, ಸಣ್ಣ ಬಸನಗೌಡ, ದೇವೇಂದ್ರಪ್ಪ ಬೊಮ್ಮನಾಳ, ಮುನಿಸ್ವಾಮಿ, ಇದಾಯತ್, ಜಾಫರ್, ಮೊಹ್ಮದ್ ಪಾಷಾ, ಜಾವೀದ್ ಖಾನ್ ಸೇರಿದಂತೆ ಅನೇಕರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್