ಬಿಜೆಪಿ ಧರಣಿ ಬಿತ್ತಿ ಪತ್ರ ಬಿಡುಗಡೆ
ಬೆಂಗಳೂರು, 31 ಮಾರ್ಚ್ (ಹಿ.ಸ.) : ಆ್ಯಂಕರ್ : ರಾಜ್ಯದ ಜನತೆಯ ಮೇಲೆ ಬೆಲೆ ಏರಿಕೆಯ ಹೊರೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಜನವಿರೋಧಿ ನಡೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಏಪ್ರಿಲ್‌ 2 ರಂದು ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್
Bjp


ಬೆಂಗಳೂರು, 31 ಮಾರ್ಚ್ (ಹಿ.ಸ.) :

ಆ್ಯಂಕರ್ : ರಾಜ್ಯದ ಜನತೆಯ ಮೇಲೆ ಬೆಲೆ ಏರಿಕೆಯ ಹೊರೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಜನವಿರೋಧಿ ನಡೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಏಪ್ರಿಲ್‌ 2 ರಂದು ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪ್ರತಿಭಟನೆಯ ಬಿತ್ತಿ ಪತ್ರಗಳನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಬಿ. ಶ್ರೀರಾಮುಲು, ಬೈರತಿ ಬಸವರಾಜ್, ಮುನಿರತ್ನ, ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್, ಸಂಸದರಾದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ, ಶಾಸಕರಾದ ಎಸ್.‌ ಆರ್.‌ ವಿಶ್ವನಾಥ್‌, ಬಸವರಾಜ ಮತ್ತಿಮೂಡ, ಕೃಷ್ಣಪ್ಪ, ಸಿ. ಕೆ. ರಾಮಮೂರ್ತಿ, ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ. ಎಸ್.‌ ಪಾಟೀಲ್‌ ನಡಹಳ್ಳಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande